ಬೆಂಗಳೂರು: ಬಿಜೆಪಿಯ ದಕ್ಷಿಣ ದಂಡಯಾತ್ರೆ ಕನಸು ನುಚ್ಚುನೂರು

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನಗಳನ್ನು ಪಡೆಯುವ ಮೂಲಕ ಭಾರೀ ಬಹುಮತ ಪಡೆದಿದೆ. ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಏಕಮಾತ್ರ ಆಶಾಕಿರಣವಾಗಿದ್ದ ಕರ್ನಾಟಕವು ಕೈ ತಪ್ಪಿದೆ. ಈ ಮೂಲಕ ದಕ್ಷಿಣದಲ್ಲಿ ಅಧಿಕಾರ ಪಡೆಯಬೇಕೆಂಬ ಕೇಸರಿ ಪಕ್ಷದ ಆಸೆ ನುಚ್ಚುನೂರಾಗಿದೆ. ದಕ್ಷಿಣ ಭಾರತದ ರಾಜ್ಯಗಳಾದ ತೆಲಂಗಾಣ, ಆಂದ್ರ ಪ್ರದೇಶ, ಕೇರಳ ಹಾಗೂ ತಮಿಳುನಾಡುಗಳಲ್ಲಿ ಬಿಜೆಪಿಗೆ ಅಸ್ತಿತ್ವವಿಲ್ಲ. ಇನ್ನು ಕರ್ನಾಟಕದಲ್ಲಿ ಮಾತ್ರ ಬಿಜೆಪಿ ನೆಲೆಕಂಡುಕೊಂಡಿತ್ತು. ಅದು ಕೂಡ ಈಗ ಕೈತಪ್ಪಿದೆ.

ಈಗ ಕರ್ನಾಟಕವನ್ನು ಕಳೆದುಕೊಂಡಿರುವ ಬಿಜೆಪಿಗೆ ದಕ್ಷಿಣ ಭಾರತದಲ್ಲಿ ನೆಲೆ ಇಲ್ಲದಂತಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಪಾಂಡಿಚೇರಿಯಲ್ಲಿ ಮಾತ್ರ ಬಿಜೆಪಿ ಅಸ್ತಿತ್ವದಲ್ಲಿದೆ. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ಉತ್ತರ ಪ್ರದೇಶ, ಗುಜರಾತ್‌ ಹಾಗೂ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಹಿಂದಿ ಭಾಷಿಗರ ಪ್ರಭಾವವಿರುವ ರಾಜ್ಯಗಳಲ್ಲಿ ಬಿಜೆಪಿ ನೆಲೆ ಕಂಡುಕೊಂಡಿದೆ. ಕರ್ನಾಟಕ ಚುನಾವಣೆ ಫಲಿತಾಂಶ ರಾಷ್ಟ್ರ ರಾಜಕಾರಣದ ಮಹತ್ವದ ಪರಿಣಾಮ ಬೀರಲಿದೆ. ಈ ಫಲಿತಾಂಶವು ಕರ್ನಾಟಕದ ಪಾಲಿಗೆ ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

2 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

2 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago