News Karnataka Kannada
Friday, May 03 2024
ಬೆಂಗಳೂರು

ಬೆಂಗಳೂರು: ಬಿಜೆಪಿ ಪ್ರಣಾಳಿಕೆ ಸಮಿತಿಯಲ್ಲಿ ಬಹುಸಂಖ್ಯೆಯ ಬ್ರಾಹ್ಮಣರು

ಕಾಂಗ್ರೆಸ್  ಸರ್ಕಾರದ ವಿರುದ್ಧ ಎಕ್ಸ್ ಖಾತೆಯಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ ಎಂದು ವ್ಯಂಗ್ಯವಾಡಿದೆ.
Photo Credit : Facebook

ಬೆಂಗಳೂರು:  ರಾಜ್ಯ ಬಿಜೆಪಿ ಪ್ರಣಾಳಿಕೆ ಸಮಿತಿಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರನ್ನು ಹೊರತುಪಡಿಸಿ ಉಳಿದವರೆಲ್ಲರೂ ಬ್ರಾಹ್ಮಣರೇ ಆಗಿದ್ದಾರೆ.  ಈ ಸಮಿತಿ ಬದಲಿಗೆ ಪ್ರಧಾನಿಯವರ ಸಬ್ ಕಾ ಸಾಥ್- ಸಬ್ ಕಾ ವಿಕಾಸ್ ಮಾದರಿಯಂತೆ  ಎಲ್ಲಾ ಸಾಮಾಜಿಕ ಗುಂಪುಗಳ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ಮರುರಚಿಸಬೇಕು ಎಂದು ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಸಾಧು ಸುಮನ್ ಒತ್ತಾಯಿಸಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮಾಜಿ ಸಚಿವ ಸುರೇಶ್ ಕುಮಾರ್, ತೇಜಸ್ವಿನಿ ಅನಂತ್ ಕುಮಾರ್ ಪ್ರಣಾಳಿಕೆ ಸಮಿತಿ ಸದಸ್ಯರಾಗಿದ್ದಾರೆ.

ಬಿಜೆಪಿ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಿ ಸಮಿತಿಯನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ. ಇತರ ಸಾಮಾಜಿಕ ಗುಂಪುಗಳಿಗೆ ಸೇರಿದ ಸಾರ್ವಜನಿಕರು ಎದುರಿಸುತ್ತಿರುವ ನಿಜವಾದ ಸವಾಲುಗಳ ಬಗ್ಗೆ ಸಮಿತಿಯ ಸದಸ್ಯರಿಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು