ಬೆಂಗಳೂರು

ಬೆಂಗಳೂರು: ವೀರ ಯೋಧ ಪ್ರಾಂಜಲ್‌ ಅಂತ್ಯಕ್ರಿಯೆ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತ್ಯ ಕ್ರಿಯೆ ಸೇನಾ ಗೌರವಗಳೊಂದಿಗೆ ಇಂದು ನೆರವೇರಿತು. ಸಾವಿರಾರು ಮಂದಿ ಆಗಮಿಸಿ ಹುತಾತ್ಮರಾದ ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ಅಮರ್ ರಹೇ ಘೋಷಣೆಯೊಂದಿಗೆ ಹುತಾತ್ಮ ಯೋಧನ ಅಂತ್ಯಕ್ರಿಯೆ ನೆರವೇರಿತು. ಶನಿವಾರ ಬೆಳಗ್ಗೆ 8ರಿಂದಲೂ ಜಿಗಣಿ ಸಮೀಪದ ನಂದನವದಲ್ಲಿನ ಪ್ರಾಂಜಲ್‌ ಅವರ ನಿವಾಸದ ಮುಂಭಾಗದಲ್ಲಿ ಪ್ರಾಂಜಲ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಪೊಲೀಸ್‌ ಮತ್ತು ಮಿಲಿಟರಿ ಪಡೆಗಳು ಹುತಾತ್ಮ ಯೋಧನಿಗೆ ಗೌರವ ವಂದನೆ ಸಲ್ಲಿಸಿದರು.

ಗೌರವ ವಂದನೆಯ ನಂತರ ಪಾರ್ಥೀವ ಶರೀರವನ್ನು ಪ್ರಾಂಜಲ್‌ ಅವರ ಮನೆಗೆ ಕೊಂಡೊಯ್ಯಲಾಯಿತು. ಕುಟುಂಬ ಸದಸ್ಯರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ಸೋಮಸುಂದರಪಾಳ್ಯದಲ್ಲಿನ ವಿದ್ಯುತ್‌ ಚಿತಾಗಾರದಲ್ಲಿ ಪ್ರಾಂಜಲ್‌ ಅವರ ಅಂತ್ಯಕ್ರಿಯೆ ನೆರವೇರಿತು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago