ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಭಾನುರೇಖಾ ಕುಟುಂಬದವರನ್ನು ಭೇಟಿಯಾದ ಮುಖ್ಯಮಂತ್ರಿ

ಬೆಂಗಳೂರು: ನಗರದ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬ ವರ್ಗದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು.

ಗಾಯಾಳುಗಳನ್ನು ಆಸ್ಪತ್ರೆಗೆ ತಕ್ಷಣ ದಾಖಲಿಸಿಕೊಳ್ಳದೆ ವಿಳಂಬ ಮಾಡಿದ್ದರ ಕುರಿತು ಮುಖ್ಯಮಂತ್ರಿಯವರು ತನಿಖೆಗೆ ಆದೇಶಿದ್ದಾರೆ.

ಮಳೆ ಅನಾಹುತದ ಮಾಹಿತಿ ದೊರೆಯುತ್ತಿದ್ದಂತೆ ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ ಆಯುಕ್ತರ ಜತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಮಳೆಯಿಂದ ಉರುಳಿ ಬಿದ್ದಿರುವ ಮರಗಳನ್ನು ತಕ್ಷಣ ತೆರವುಗೊಳಿಸಬೇಕು, ಮಳೆ ಅನಾಹುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿ ಸಾರ್ವಜನಿಕರಿಗೆ ತೊಂದರೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

Ashika S

Recent Posts

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

7 mins ago

ಮತ್ತೊಂದು ಲವ್ ಜಿಹಾದ್ ಪ್ರಕರಣ: ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ಹುಬ್ಬಳ್ಳಿಯಲ್ಲಿ  ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.

29 mins ago

ವಕೀಲರ ಸಂಘದ ಅಧ್ಯಕ್ಷರಾಗಿ ಶಿವಶರಣಪ್ಪ ಪಾಟೀಲ ಆಯ್ಕೆ

2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

49 mins ago

ಈ ವಾರವೂ ಅನಿಶ್ಚಿತ ಸ್ಥಿತಿಯಲ್ಲಿ ಚಿನ್ನದ ಬೆಲೆ: ಇವತ್ತಿನ ದರ ಪಟ್ಟಿ ಹೀಗಿದೆ

ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ…

1 hour ago

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ  ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

1 hour ago

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

9 hours ago