ಬೆಂಗಳೂರು: ಮತದಾರರ ಗುರುತಿನ ಚೀಟಿ ಹಗರಣದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಭಾಗಿಯಾಗಿದೆ ಎಂದು ಕಾಂಗ್ರೆಸ್ ಕರ್ನಾಟಕ ರಾಜ್ಯ ಘಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರಿಂದ ದತ್ತಾಂಶವನ್ನು ಕದಿಯುವಲ್ಲಿ ನೇರವಾಗಿ ಭಾಗಿಯಾಗಿದೆ. ಹಗರಣದ ಪ್ರಮುಖ ಆರೋಪಿ ಚಿಲುಮೆ ಇನ್ಸ್ಟಿಟ್ಯೂಟ್ ರವಿಕುಮಾರ್ ಇರುವ ಸ್ಥಳದಿಂದ ಬಂದ ಅನೇಕ ವ್ಯಕ್ತಿಗಳಿಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ಕಂಪನಿಯ ಬ್ಯಾಂಕ್ ಖಾತೆಯಿಂದ ಹಣವನ್ನು ವರ್ಗಾಯಿಸಲಾಗಿದೆ” ಎಂದು ಸುರ್ಜೇವಾಲಾ ಹೇಳಿದ್ದಾರೆ.
ಈ ಹಗರಣದಲ್ಲಿ ಕೇಂದ್ರ ಸರ್ಕಾರದ ನೇರ ಪಾಲ್ಗೊಳ್ಳುವಿಕೆಯನ್ನು ಸಾಬೀತುಪಡಿಸುವ ಪುರಾವೆ ಇದಾಗಿದೆ ಎಂದು ಅವರು ಹೇಳಿದರು.
“ಕೇಂದ್ರ ಸರ್ಕಾರ ನಡೆಸುತ್ತಿರುವ ಕಂಪನಿಯ ಖಾತೆಯಿಂದ ದೊಡ್ಡ ಮೊತ್ತದ ಹಣವನ್ನು ವರ್ಗಾಯಿಸಲಾಗಿದೆ. ಮತದಾರರ ದತ್ತಾಂಶವನ್ನು ಕದಿಯುವುದರ ಜೊತೆಗೆ, ಸಾಮಾನ್ಯ ಜನರ ತೆರಿಗೆ ಹಣವನ್ನು ಲೂಟಿ ಮಾಡಲಾಗಿದೆ” ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.
ವೋಟರ್ ಐಡಿ ಹಗರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಭಾಗಿಯಾಗಿರುವುದು ಸ್ಪಷ್ಟವಾಗಿದೆ.
ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಕೋನವಿದೆ. ಇದು ಕೇವಲ ಡೇಟಾ ಕಳ್ಳತನದ ಬಗ್ಗೆ ಮಾತ್ರವಲ್ಲ. ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕಾಗಿದೆ” ಎಂದು ಸುರ್ಜೇವಾಲಾ ಹೇಳಿದರು.