ಬೆಂಗಳೂರು: ಜನವರಿ 30 ರಂದು ಶ್ರೀನಗರದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಜೆಡಿಎಸ್ ಅನ್ನು ಆಹ್ವಾನಿಸಿದ್ದಾರೆ.
ಕರ್ನಾಟಕದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ವಾಕ್ಸಮರದ ನಡುವೆಯೇ ಈ ಆಹ್ವಾನ ಬಂದಿದೆ.
ಮೂಲಗಳ ಪ್ರಕಾರ, ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಪತ್ರ ಬರೆದಿದ್ದಾರೆ.
ಮೂಲಗಳನ್ನು ನಂಬುವುದಾದರೆ, ದೇವೇಗೌಡರು ತಮ್ಮ ಅನಾರೋಗ್ಯದ ನಡುವೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.
“ಕಾಂಗ್ರೆಸ್ ಹೈಕಮಾಂಡ್ ಜೆಡಿಎಸ್ ನಾಯಕತ್ವದೊಂದಿಗೆ ಉತ್ತಮ ಸಂಬಂಧ ಹೊಂದಿದೆ, ಈ ಆಹ್ವಾನದೊಂದಿಗೆ ಅದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಮೂಲಗಳು ತಿಳಿಸಿವೆ.