ಬೆಂಗಳೂರು: ಸಿ ವೋಟರ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದೆ ಎಂಬ ಅಂಶ ಬಹಿರಂಗವಾಗಿದೆ.
ಕಾಂಗ್ರೆಸ್ ಪಕ್ಷವು 106 ರಿಂದ 116 ಸ್ಥಾನ ಗಳಿಸುವ ಸಾಧ್ಯತೆ ಇದೆ. ಆಡಳಿತಾರೂಢ ಬಿಜೆಪಿ 79 ರಿಂದ 89 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಜೆಡಿಎಸ್ಗೆ 24 ರಿಂದ 34 ಸ್ಥಾನ ದೊರೆತರೆ ಇತರರು 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ.
ಕರಾವಳಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ ಹಂಚಿಕೆ ಪ್ರಮಾಣ ಶೇ 39ರಿಂದ 35.4ಕ್ಕೆ ಇಳಿಕೆಯಾಗಲಿದೆ. ಬಿಜೆಪಿ ಮತ ಹಂಚಿಕೆ ಪ್ರಮಾಣ ಶೇ 51 ಇದ್ದುದು ಶೇ 50.3ಕ್ಕೆ ಇಳಿಕೆಯಾಗಿದೆ. ಜೆಡಿಎಸ್ ಮತ ಹಂಚಿಕೆ ಪ್ರಮಾಣ ಶೇ 6 ಇದ್ದುದು ಶೇ 8.3 ಆಗಲಿದೆ. ಇತರರ ಮತ ಹಂಚಿಕೆ ಪ್ರಮಾಣ ಶೇ 4 ಇದ್ದುದು ಶೇ 6ಕ್ಕೆ ಹೆಚ್ಚಳವಾಗಲಿದೆ ಎಂದು ಸಮೀಕ್ಷೆ ತಿಳಿಸಿದೆ.