ಬೆಂಗಳೂರು: ಕುಕ್ಕರ್‌ ಬಾಂಬ್‌ ಸ್ಪೋಟ ಆರೋಪಿ ಶಾರಿಕ್‌ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟದ ವೇಳೆ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ಶಂಕಿತ ಭಯೋತ್ಪಾದಕ ಎಚ್. ಮೊಹಮ್ಮದ್ ಶಾರಿಕ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಗೊಂಡಿದ್ದಾನೆ ಮೂಲಗಳು ಖಚಿತಪಡಿಸಿವೆ.

ಶಂಕಿತ ಉಗ್ರಗಾಮಿ ಎರಡೂವರೆ ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಮೊಹಮ್ಮದ್ ಶಾರಿಕ್ ಅವರನ್ನು 2022 ರ ಡಿಸೆಂಬರ್ 17 ರಂದು ಮಂಗಳೂರಿನ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದ ಅಧಿಕಾರಿಗಳು ಸೋಮವಾರ ಅವರನ್ನು ವಶಕ್ಕೆ ತೆಗೆದುಕೊಂಡರು. ಜಾಗತಿಕ ಭಯೋತ್ಪಾದನಾ ಜಾಲದೊಂದಿಗೆ ಆತನ ಸಂಪರ್ಕಕ್ಕೆ ಸಂಬಂಧಿಸಿದಂತೆ ಸಂಸ್ಥೆಯು ಆತನನ್ನು ತನಿಖೆ ಮಾಡುತ್ತದೆ.

ಹೆಚ್ಚಿನ ತನಿಖೆಗಾಗಿ ಆತನನ್ನು ಕಸ್ಟಡಿಗೆ ಕೋರಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮೂಲಗಳು ವಿವರಿಸಿವೆ.

2022 ರ ನವೆಂಬರ್ 19 ರಂದು ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಸಂಭವಿಸಿತ್ತು. ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುವ ಸಲುವಾಗಿ ಬಾಂಬ್‌ ಸ್ಪೋಟ ನಡೆಸಲು ಉದ್ದೇಶಿಸಲಾಗಿತ್ತು. ಇಸ್ಲಾಮಿಕ್ ಸಂಘಟನೆಯಾದ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ (IRC) ನವೆಂಬರ್ 19, 2022 ರಂದು ಮಂಗಳೂರು ಆಟೋ ಸ್ಫೋಟದ ಹೊಣೆಯನ್ನು ಹೊತ್ತುಕೊಂಡಿದೆ ಮತ್ತು ಭವಿಷ್ಯದಲ್ಲಿ ಮತ್ತೊಂದು ದಾಳಿಯ ಎಚ್ಚರಿಕೆಯನ್ನು ನೀಡಿದೆ. ಇತ್ತೀಚೆಗೆ ಭಯೋತ್ಪಾದಕ ಸಂಘಟನೆ ಐಸಿಸ್ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು.

ಭಯೋತ್ಪಾದಕ ಶಂಕಿತ ಶಾರಿಕ್ ಬಿಕಾಂ ಪದವೀಧರನಾಗಿದ್ದು, ಈಗ ಪೊಲೀಸ್ ವಶದಲ್ಲಿರುವ ಮತ್ತೊಬ್ಬ ಶಂಕಿತ ಐಸಿಸ್ ಭಯೋತ್ಪಾದಕ ಮಾಜ್ ಮುನೀರ್ ಜತೆಗಿದ್ದ. ಇಬ್ಬರೂ ಬಾಂಬ್‌ಗಳನ್ನು ಸಿದ್ಧಪಡಿಸಿದ್ದರು ಎನ್ನಲಾಗಿದೆ. ಮಂಗಳೂರಿನ ಪ್ರಕರಣದಲ್ಲಿ ಬಾಂಬ್‌ ಜೋಡಣೆ ಸರಿಯಾದ ರೀತಿಯಲ್ಲಿ ಇರದ ಕಾರಣ ಅವರ ಕುಕೃತ್ಯಕ್ಕೆ ಹಿನ್ನಡೆಯಾಗಿತ್ತು. ಶಂಕಿತ ಭಯೋತ್ಪಾದಕನ ಚೇತರಿಕೆಯು ತನಿಖೆಗೆ ಮಹತ್ತರ ಪರಿಣಾಮ ಬೀರಲಿದೆ ಎಂದು ಎನ್ಐಎ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರು ಭಯೋತ್ಪಾದಕ ಶಂಕಿತ ಶಾರಿಕ್‌ನ ಕೃತ್ಯ ಮತ್ತು ಕ್ರಮವು ಜಾಗತಿಕ ಭಯೋತ್ಪಾದನಾ ಜಾಲದಿಂದ ಪ್ರೇರಿತವಾಗಿದೆ ಎಂದು ಹೇಳಿಕೆ ನೀಡಿದ್ದರು.

Ashika S

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

15 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

23 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

23 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

38 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

44 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

57 mins ago