ಬೆಂಗಳೂರು: ವೃದ್ಧರು, ಅಶಕ್ತರಿಗೆ ಮನೆಯಿಂದ ಮತದಾನ ಅವಕಾಶ, ನೋಂದಣಿ ಹೇಗೆ ತಿಳಿಯಿರಿ

ಬೆಂಗಳೂರು/ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮೇ 13ರಂದು ಮತ ಎಣಿಕೆ ನಡೆಯಲಿದೆ.

ಎಲ್ಲರಿಗೂ ಮತದಾನ ಅವಕಾಶ ದೊರೆಯಬೇಕು ಎಂಬ ನಿಟ್ಟಿನಲ್ಲಿ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಅವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ಮುಖ್ಯಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

ಯಾರೆಲ್ಲ ಮನೆ ಮತದಾನಕ್ಕೆ ಅರ್ಹರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷದ ಹಿರಿಯನಾಗರಿಕರು, ಅದಕ್ಕೂ ಮೇಲ್ಪಟ್ಟ ಹಿರಿಯರು, ವೃದ್ಧರು ಅಂಗವೈಕಲ್ಯವುಳ್ಳವರು ಮತ್ತು ಹಾಸಿಗೆ ಹಿಡಿದು ಎದ್ದು ಬರಲಾಗದ ಸ್ಥಿತಿಯಲ್ಲಿರುವವರು ಮನೆಯಿಂದಲೇ ಮತದಾನ ಮಾಡಲು ಅರ್ಹರಾಗಿದ್ದಾರೆ.

ಮನೆಯಿಂದ ಮತದಾನ ಹೇಗೆ?
ವೃದ್ಧರು, ಅಶಕ್ತರು ಮತದಾನದಲ್ಲಿ ಪಾಲ್ಗೊಳ್ಳಲು ಚುನಾವಣೆ ಆಯೋಗದ ವೆಬ್‌ಸೈಟ್‌, ವೋಟರ್‌ ಹೆಲ್ಪ್‌ಲೈನ್‌ ಅಥವಾ ಸಕ್ಷಮ್‌ ಆ್ಯಪ್‌ನಲ್ಲಿ ನೋಂದಣಿ ಕಡ್ಡಾಯವಾಗಿ ಮಾಡಿಕೊಳ್ಳಬೇಕು. ಅಲ್ಲದೇ ಸ್ಥಳೀಯ ಬೂತ್‌ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ ನೀಡಲಾಗಿದೆ. ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆಯಾಗಲಿದೆ. ಬಳಿಕ ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ ಒದಗಿಸಲಾಗುವುದು. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ ನಡೆಸಲಾಗುವುದು.

ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ ಒದಗಿಸಲಾಗುವುದು.

Ashika S

Recent Posts

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

9 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

20 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

34 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

55 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

2 hours ago