ಬೆಂಗಳೂರು

ಬೆಂಗಳೂರು: ಬೆಳೆ ಸ್ಪರ್ಧೆಗೆ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಬೆಂಗಳೂರು: 2022 23ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿ (ಬೆಳೆ ಸ್ಪರ್ಧೆ)ಗಾಗಿ ಭಾಗವಹಿಸಲಿಚ್ಛಿಸುವ ರೈತರು ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಸಕ್ತ 2022- 23ನೇ ಸಾಲಿನಿಂದ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಮಹಿಳೆಯರನ್ನು ಕೃಷಿಯ ಕಡೆ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ ರಾಜ್ಯ ಜಿಲ್ಲಾ ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಪ್ರಶಸ್ತಿಗೆ ಅರ್ಜಿಗಳನ್ನು ಸಲ್ಲಿಸುವ ಮುಖಾಂತರ ಕಾರ್ಯಕ್ರಮದ ಪ್ರಯೋಜನ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಸ್ಪರ್ಧಿಸಬಹುದಾದ ಬೆಳೆಗಳ ವಿವರಗಳು, ಅರ್ಜಿ ನಮೂನೆ, ಪ್ರವೇಶ ಶುಲ್ಕ  ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ  ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಅಪರ ಕೃಷಿ ನಿರ್ದೇಶಕರು (ಮಾನವ ಸಂಪನ್ಮೂಲ ಅಭಿವೃದ್ಧಿ) ತಿಳಿಸಿದ್ದಾರೆ.

Ashika S

Recent Posts

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

12 seconds ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

24 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

38 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

57 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago