ಬೆಂಗಳೂರು: ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮತ್ತು ಆತನ ಇಬ್ಬರು ಪುತ್ರಿಯರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು 28 ವರ್ಷದ ಅವಿನಾಶ್, ಪ್ರಣಂತಿ (5) ಮತ್ತು ಸೌಖ್ಯ (3) ಎಂದು ಗುರುತಿಸಲಾಗಿದೆ.
ವ್ಯಕ್ತಿ ಮತ್ತು ಅವರ ಒಬ್ಬ ಪುತ್ರಿ ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬ ಮಗಳು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಹೆಚ್ಚಿನ ವಿವರಗಳು ಇನ್ನೂ ಹೊರಬರಬೇಕಾಗಿದೆ. ಕಲ್ಲಂಬಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.