ಬೆಂಗಳೂರು: ನೂತನ ಶಾಸಕರಿಗೆ ಧೈರ್ಯ ತುಂಬಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

ಬೆಂಗಳೂರು: ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ?

ಹೀಗೆ ಗುಡುಗಿದ್ದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು. ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಅವರು ಕೆಲವು ಹಿತನುಡಿಗಳನ್ನು ಹೇಳಿದರು.

19 ಸೀಟು ಗೆದ್ದಿದ್ದೇವೆ ಎಂಬ ಆತಂಕ ಬೇಡ. 119 ಸೀಟು ಗೆಲ್ಲುವ ದಿಕ್ಕಿನಲ್ಲಿ ಕೆಲಸ ಮಾಡೋಣ. ನಾನು ಬದುಕಿರುವ ತನಕ ಪಕ್ಷಕ್ಕಾಗಿ ದುಡಿಯುತ್ತೇನೆ. ನೀವು ಯಾರೂ ಧೈರ್ಯ ಕಳೆದುಕೊಳ್ಳಬೇಡಿ.

ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎನ್ನುವುದನ್ನು ಅರ್ಥ ಮಾಡಿಕೊಳ್ಳೋಣ. ಜನರ ಜತೆ ನಿಂತು ಕೆಲಸ ಮಾಡೋಣ. ಪ್ರಾಮಾಣಿಕತೆ, ಬದ್ಧತೆ, ಆಚಲತೆಯಿಂದ ದುಡಿದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟವಲ್ಲ.

ನಾನು ಕೂಡ ಸೋತಿದ್ದೇನೆ, ಗೆದ್ದಿದ್ದೇನೆ. ಸೋತಾಗ ಹೆದರಿ ಮನೆ ಸೇರಿಕೊಂಡಿಲ್ಲ, ಗೆದ್ದಾಗ ಬೀಗಿಲ್ಲ. ಎಲ್ಲಾ ಸಮಯದಲ್ಲೂ ಶ್ರದ್ಧೆ, ವಿನಯದಿಂದ ಜನರ ಕೆಲಸ ಮಾಡಿದ್ದೇನೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಿದ್ದೇನೆ.

1962ರಲ್ಲಿ ಪಕ್ಷೇತರ ಶಾಸಕನಾಗಿ ಗೆದ್ದುಬಂದು ಈ ನೆಲ ಜಲಕ್ಕಾಗಿ ಹೋರಾಟ ನಡೆಸಿದವನು ನಾನು. ಒಬ್ಬನೇ ಶಾಸಕ ಎಂದು ನಾನು ಕೈಕಟ್ಟಿ ಕೂತಿದ್ದರೆ ಕಾವೇರಿ ನೀರಿನ ಸದ್ಬಳಕೆ ಸಾಧ್ಯ ಆಗುತ್ತಿತ್ತಾ? ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ತಲೆ ಎತ್ತುತ್ತಿದ್ದವಾ? ಮನಸ್ಸಿಟ್ಟು ಯೋಚನೆ ಮಾಡಿ, ಅಧೈರ್ಯಪಟ್ಟರೆ ಉಪಯೋಗವಿಲ್ಲ. ನಿಮ್ಮ ಜತೆ ಕುಮಾರಸ್ವಾಮಿ ಅವರು ನಿಲ್ಲುತ್ತಾರೆ, ಹೋರಾಟ ಮಾಡಿ.

ಮುಂದೆ ಅನೇಕ ಚುನಾವಣೆಗಳು ಬರಲಿವೆ. ಲೋಕಸಭೆ ಚುನಾವಣೆ ಕೂಡ ಬರುತ್ತದೆ. ಈಗಿನಿಂದಲೇ ಕೆಲಸ ಮಾಡಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿ. ನಿಮ್ಮ ಜತೆ ನಾನು, ಕುಮಾರಸ್ವಾಮಿ ಅವರು ಇರುತ್ತೇವೆ. ಹೆದರಿ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಹೆದರಿ ಕೂತರೆ ಏನನ್ನೂ ಸಾಧನೆ ಮಾಡಿದಂತೆ ಆಗುವುದಿಲ್ಲ.

ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ನೂತನ ಶಾಸಕರ ಜತೆ ಮಾತುಕತೆ ನಡೆಸಿದರು.

ಈ ಸರಕಾರ ಗ್ಯಾರಂಟಿಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿದೆ. ಆಗಲೇ ಅಧಿಕಾರಕ್ಕಾಗಿ ಕಿರಿಕಿರಿ ಮಾಡಿಕೊಳ್ಳುತ್ತಿದ್ದಾರೆ. ನಮಗೆ ಅವರ ರಾಜಕೀಯ ಬೇಕಿಲ್ಲ. ಜನತೆಗೆ ಅವರು ಕೊಟ್ಟ ವಚನ ಪಾಲಿಸುವಂತೆ ಹೋರಾಟ ಮಾಡೋಣ ಎಂದರು.

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಹಿರಿಯ ಶಾಸಕರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಪಕ್ಷದ ಎಲ್ಲಾ ನೂತನ ಶಾಸಕರು ಸಭೆಯಲ್ಲಿ ಹಾಜರಿದ್ದರು.

Ashika S

Recent Posts

ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಮೂವರು ಸಾವು

ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮದ ಬಳಿ  ಕ್ರೂಸರ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ…

13 mins ago

ಶ್ರೀ ಕೃಷ್ಣ ಧಾಮದಲ್ಲಿ ಉಚಿತ ಸಾಮೂಹಿಕ ಉಪನಯನ

ನಗರದ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ…

33 mins ago

ದೇಶದದ್ಯಾಂತ ಪ್ರಜ್ವಲಿಸಿದ ಪ್ರಜ್ವಲ್‌ ಪೆನ್‍ಡ್ರೈವ್; ಈತ ಅದೆಂಥಾ ವಿಕೃತ ಕಾಮಿಯಾಗಿರಬೇಡ

ಹಾಸನದ ಸಂಸದರೂ ಆಗಿರೋ  ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಭವಾನಿ ದಂಪತಿಯ ಹಿರಿಯ ಮಗ ಪ್ರಜ್ವಲ್. ಈತನ ಕಾಮಕಾಂಡದ…

1 hour ago

ಜಾತಿ ನಿಂದನೆ ಕೇಸ್ ಹೆದರಿದ ಯುವಕ ಆತ್ಮಹತ್ಯೆಗೆ ಶರಣು

ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ…

2 hours ago

ಚಾರ್ಜ್​ಗೆ ಇಟ್ಟ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ಹತ್ತಿರದ ಶಾಮಿಯಾನ‌ ಅಂಗಡಿ ಸುಟ್ಟು ಭಸ್ಮ

ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ.

2 hours ago

ದನದ ಮಾಂಸ ರಫ್ತಿನಲ್ಲಿ ಬಿಜೆಪಿ 2ನೇ ಸ್ಥಾನ: ಸಂತೋಷ್‌ ಲಾಡ್‌

ಬಿಜೆಪಿ ಸರಕಾರದ ಸಾಧನೆ ಕೇವಲ ಎರಡೇ ಎರಡು. ಒಂದು ದನದ ಮಾಂಸ ರಫ್ತಿನಲ್ಲಿ 2ನೇ ಸ್ಥಾನ. ಎರಡು ಮೋದಿ ಸ್ವಜಾಹೀರಾತಿಗಾಗಿ…

2 hours ago