ಆರಗ ಇತಿಹಾಸದಲ್ಲಿಯೇ ಅಸಮರ್ಥ ಗೃಹಸಚಿವ, ಸಿದ್ದರಾಮಯ್ಯ ಹೇಳಿಕೆ

ಆರಗ ಇತಿಹಾಸದಲ್ಲಿಯೇ ಅಸಮರ್ಥ ಗೃಹಸಚಿವ, ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕರ್ನಾಟಕ ಘಟಕ ಶನಿವಾರ ವಾಗ್ದಾಳಿ ನಡೆಸಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅದಕ್ಷತೆಯೇ ಈ ಘಟನೆಗೆ ಕಾರಣವಾ ಎಂದಿದೆ. ಗೃಹ ಸಚಿವರ ಅದಕ್ಷತೆಯಿಂದ ರಾಜ್ಯ ಪೊಲೀಸ್ ಇಲಾಖೆ ಹಳಿ ತಪ್ಪಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

‘ಚುನಾವಣೆ ಹಂತದಲ್ಲಿ ಪೊಲೀಸರ ನಿಷ್ಕ್ರಿಯತೆ ಅಪಾಯಕಾರಿಯಾಗಿದ್ದು, ಪೊಲೀಸ್ ಇಲಾಖೆಯ ಕಾರ್ಯವೈಖರಿ ಮೇಲೆ ನಿಗಾ ವಹಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ’ ಎಂದು ಮನವಿ ಮಾಡಿದರು. ಮಾರ್ಚ್ 25 ರಂದು ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದರು.

ಸಂತ್ರಸ್ತೆ ನಗರದ ಕೋರಮಂಗಲ ಪ್ರದೇಶದವರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆ ಎಂಬ ನಂಬಿಕೆಯನ್ನು ಜನತೆ ಕಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು. ಸಮಾಜವಿರೋಧಿಗಳು ಮತ್ತು ಅಪರಾಧಿಗಳನ್ನುಸರ್ಕಾರ ಮಟ್ಟಹಾಕಬೇಕಿದೆ ಎಂದು ಅವರು ಹೇಳಿದರು. ರೌಡಿ ಶೀಟರ್‌ಗಳು, ಕೊಲೆಗಡುಕರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡಿ ಪಕ್ಷಕ್ಕೆ ಅನುಕೂಲ ಮಾಡಿಕೊಟ್ಟ ಪರಿಣಾಮ ಜನ ಇಂತಹ ಸ್ಥಿತಿ ಎದುರಿಸುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

Ashika S

Recent Posts

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

3 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

9 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

22 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

40 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

56 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

57 mins ago