News Karnataka Kannada
Tuesday, April 16 2024
Cricket
ಬೆಂಗಳೂರು ಗ್ರಾಮಾಂತರ

ಆರೋಗ್ಯ ಕಾಪಾಡಲು ಆರೋಗ್ಯ ಮೇಳ ಸಹಕಾರಿ: ಶಾಸಕ ನಿಸರ್ಗ ನಾರಾಯಣಸ್ವಾಮಿ

Bng
Photo Credit :

ಬೆಂಗಳೂರು ಗ್ರಾಮಾಂತರ: ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಅದರಲ್ಲೂ ಬಡವರಿಗೆ ಆರೋಗ್ಯದ ಕುರಿತು ಅರಿವು ಮೂಡಿಸುವ ಅಗತ್ಯವಿರುವ ಹಿನ್ನೆಲೆ, ಪ್ರತಿಯೊಬ್ಬರ ಆರೋಗ್ಯ ರಕ್ಷಣೆಯೂ ಮುಖ್ಯವಾಗಿರುವುದರಿಂದ ಸರ್ಕಾರವು ಆರೋಗ್ಯ ಮೇಳವನ್ನು ಆಯೋಜಿಸಿದೆ ಎಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ  ನಾರಾಯಣಸ್ವಾಮಿ ಅವರು ತಿಳಿಸಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ್ ಕಾರ್ಯಕ್ರಮ ಪ್ರಾರಂಭಿಸಿದ ನಾಲ್ಕನೇ ವರ್ಷದ  ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದೇವನಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾದ ಬೃಹತ್ ಆರೋಗ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲ್ಲಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿದ್ದು, ಆರೋಗ್ಯ ರಕ್ಷಣೆಯೂ ಒಂದು ಸವಾಲಾಗಿ ಪರಿಣಮಿಸಿದೆ ಎಂದರಲ್ಲದೆ, ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲೂ ಆರೋಗ್ಯದ ಕಾಪಾಡಿಕೊಳ್ಳುವ ಕುರಿತು ಅಂಗನವಾಡಿ  ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಕೋವಿಡ್ ವಾರಿಯರ್ಸ್ ಆಗಿ ಪ್ರತಿದಿನ ಸೇವೆ ಸಲ್ಲಿಸುತ್ತಿದ್ದಾರೆ ಎಂದರಲ್ಲದೆ,     ಪ್ರತಿದಿನ ಗ್ರಾಮಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕರ ಆರೋಗ್ಯ ಮಾಹಿತಿ ಸಂಗ್ರಹಿಸಿ, ಅಗತ್ಯವಿರುವವರಿಗೆ ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಗಳಿಗೆ ಕರೆದುಕೊಂಡು ಬರುವಂತಹ ಪ್ರಾಮಾಣಿಕ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ಮೇಳ ಕಾರ್ಯಕ್ರಮಗಳನ್ನು  ಆಯೋಜಿಸಿ, ಮಾಹಿತಿಯನ್ನು ಸಮರ್ಪಕವಾಗಿ ತಿಳಿಸುವುದರಿಂದ ಗ್ರಾಮೀಣ ಮಹಿಳೆಯರು, ಕೂಲಿ ಕಾರ್ಮಿಕರು, ರೈತರು, ಬಡವರ್ಗದವರಿಗೆ ಸಹಕಾರಿಯಾಗಲಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ಕೇಂದ್ರ ಸರ್ಕಾರದ ನಿರ್ದೇಶನದಂತೆ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಾರಿ ಆರೋಗ್ಯಮೇಳ ಕಾರ್ಯಕ್ರಮವನ್ನು ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಜರಾಗಿರುವುದು ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಿದೆ ಎಂದು ತಿಳಿಸಿದರು.

ಕ್ಯಾನ್ಸರ್ ನಿಯಂತ್ರಣದ ಬಗ್ಗೆ ಜಾಗೃತಿ, ತಾಯಿ ಮತ್ತು ಮಗುವಿನ ಆರೋಗ್ಯ ತಪಾಸಣೆ ಹಾಗೂ ಕುಟುಂಬ ಕಲ್ಯಾಣ ಸೇವೆಗಳು, ಕೋವಿಡ್ -೧೯ ಲಸಿಕಾಕರಣ, ಎಬಿಎಆರ್‌ಕೆ ಕಾರ್ಡ್, ಆಯುಷ್, ಯುನಾನಿ ಮತ್ತು ಹೋಮಿಯೋಪತಿ ಚಿಕಿತ್ಸೆ, ಯೋಗ   ಹಾಗೂ ಧ್ಯಾನ ಶಿಬಿರಗಳನ್ನು ಆಯೋಜಿಸಲಾಗಿದ್ದು, ಆರೋಗ್ಯ ಮೇಳದಲ್ಲಿ ಭಾಗವಹಿಸುವುದರಿಂದ ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ, ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ಗೋಪಮ್ಮ, ಉಪಾಧ್ಯಕ್ಷರಾದ ಗೀತಾ, ಬೆಂಗಳೂರು ಗ್ರಾಮಾಂತರ  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ತಿಪ್ಪೇಸ್ವಾಮಿ, ದೇವನಹಳ್ಳಿ ತಹಶೀಲ್ದಾರ್ ಶಿವರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಂಜಯ್, ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತಕುಮಾರ್, ದೇವನಹಳ್ಳಿ ಮುಖ್ಯಾಧಿಕಾರಿ ಹೆಚ್.ನಾಗರಾಜು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು