News Karnataka Kannada
Monday, April 29 2024
ಬೆಂಗಳೂರು ಗ್ರಾಮಾಂತರ

ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಕೆ.ರೇವಣಪ್ಪ

Untitled 1
Photo Credit : News Kannada

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2021-22ರ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಜಿಲ್ಲೆಯ ಸರ್ಕಾರಿ ನೌಕರರು ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರಬೇಕು ಎಂದರು. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ನಾಲ್ಕು ತಾಲ್ಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಹಬ್ಬದ ವಾತಾವರಣ ಮೂಡಿ, ಸಂತಸ ತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಗಂಗಾಧರಪ್ಪ ಮಾತನಾಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರಿಗೆ ಪ್ರತಿ ವರ್ಷ ಸರ್ವೋತ್ತಮ ಪ್ರಶಸ್ತಿ ನೀಡಲಾಗುತ್ತದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಏಳು ಜನರಿಗೆ ಈ ವರ್ಷ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕ್ಕೃತರನ್ನು, ಮಿನಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ವಿಜೇತರಾದವರನ್ನು ಹಾಗೂ ಕಳೆದ ವರ್ಷ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟದಲ್ಲಿ ವಿಜೇತರಾದವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಸುಧಾರಾಣಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ,  ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ತಹಶೀಲ್ದಾರ್ ಮೋಹನಕುಮಾರಿ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳು, ನಾಲ್ಕು ತಾಲ್ಲೂಕುಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು