News Karnataka Kannada
Sunday, May 05 2024
ಬೆಂಗಳೂರು ಗ್ರಾಮಾಂತರ

ಬೆಂಗಳೂರು: ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಬೈಕ್ ,ಕಾಲೇಜು ವಿದ್ಯಾರ್ಥಿ ದುರ್ಮರಣ

Accident
Photo Credit :

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚುಂಚೇಗೌಡನ ಹೊಸಹಳ್ಳಿ ಬಳಿ ತಂದೆ ಹಾಗೂ ಮಗ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು,ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ  ನಡೆದಿದೆ.

ಅಂಬಲಗೆರೆ ನಿವಾಸಿ ವರುಣ್ (18) ಮೃತ ವಿದ್ಯಾರ್ಥಿ. ವರುಣ್ ತನ್ನ ತಂದೆಯ ಜತೆಯಲ್ಲಿ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ. ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ.

ಬಸ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಗೆ ಬೈಕ್ ಗುದ್ದಿದ್ದು, ಅಪಘಾತದ ರಭಸಕ್ಕೆ ವಿದ್ಯಾರ್ಥಿ ಹಾರಿ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆಯೇ ಕ್ಯಾಂಟರ್ ಹರಿದು ಹೋಗಿದೆ ಎಂದು ತಿಳಿದುಬಂದಿದೆ. ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು