News Karnataka Kannada
Sunday, May 05 2024
ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

Banglore Gramantara Dc
Photo Credit : News Kannada
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಕೊರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕ ರೋಗದ ಹೊಸ ರೂಪಾಂತರ ಒಮಿಕ್ರಾನ್ ಹಾವಳಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 2022ರ ಜನವರಿ 14ರ ಮಧ್ಯರಾತ್ರಿ 12ಗಂಟೆಯಿಂದ ವಿವಿಧ ನಿಬಂಧನೆಗಳ ಮೇರೆಗೆ ನಿಷೇಧಾಜ್ಞೆಯನ್ನು ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಮಕರ ಸಂಕ್ರಾಂತಿ ಹಬ್ಬದ ಆಚರಣೆಗಳನ್ನು ನಿಷೇಧಿಸಲಾಗಿದೆ ಹಾಗೂ ಮುಂಬರುವ ಯಾವುದೇ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶ, ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಿಷೇಧಿಸಲಾಗಿದೆ.
ಎಲ್ಲಾ ರೀತಿಯ ಸಾಮಾಜಿಕ ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ, ಕಾರ್ಯಕ್ರಮಗಳು ಹಾಗೂ ಗುಂಪು ಸೇರುವುದನ್ನು ನಿಬರ್ಂಧಿಸಿದೆ ಹಾಗೂ ಎಲ್ಲಾ ರೀತಿಯ ಧಾರ್ಮಿಕ ಕಾರ್ಯಗಳನ್ನು ಸಾಂಕೇತಿಕವಾಗಿ ಆಚರಣೆ ಮಾಡಬಹುದಾಗಿದೆ. ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುವುದು ಕಡ್ಡಾಯವಾಗಿದೆ.
ಯಾವುದೇ ಸಾರ್ವಜನಿಕ ಮೈದಾನ, ರೇಸಾರ್ಟ್, ಹೋಟೆಲ್, ಪಾರ್ಟಿ ಹಾಲ್, ಕಲ್ಯಾಣ ಮಂಟಪ ಮತ್ತು ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು-ಗುಂಪಾಗಿ ಹಬ್ಬಗಳನ್ನು ಆಚರಣೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಈ ಎಲ್ಲಾ ಎಲ್ಲಾ ಕಟ್ಟುನಿಟ್ಟಾದ ನಿಬರ್ಂಧಗಳು ಜನರ ಚಲನ-ವಲನಗಳಿಗೆ ಸಂಬಂಧಿಸಿದವುಗಳಾಗಿದ್ದು, ಅಗತ್ಯ ಸರಕುಗಳಿಗೆ ಸಂಬಂಧಿಸಿರುವುದಿಲ್ಲ.
ಯಾವುದೇ ವ್ಯಕ್ತಿ ಈ ಮೇಲಿನ ಕೋವಿಡ್-19ರ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸಿದಲ್ಲಿ, ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51 ರಿಂದ 60ರ ಜೊತೆಗೆ, ಭಾರತೀಯ ದಂಡ ಸಂಹಿತೆ ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು