ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಸಾವು: ತಬ್ಬಲಿಯಾದ ನವಜಾತ ಶಿಶು

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ದೊಡ್ಡಬಳ್ಳಾಪುರ ತಾಯಿ ಮಗು ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ ತಾಯಿ/ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಸಾವನ್ನಪ್ಪಿದ್ದಾರೆಂದು ಮೃತಳ ಕುಟುಂಬಸ್ಥರು ಆರೋಪ ಮಾಡಿದ್ದು, ಇದೀಗ ತಾಯಿ ಇಲ್ಲದೇ ನವಜಾತ ಶಿಶು ಅನಾಥವಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ಗ್ರಾಮದ ಸವಿತಾ(23) ಅವರನ್ನು ಹೆರಿಗೆಗಾಗಿ ದೊಡ್ಡಬಳ್ಳಾಪುರ ತಾಯಿ ಮಗು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಧಿಕ ರಕ್ತಸ್ರಾವದಿಂದ ಹೆರಿಗೆಯಾದ ಕ್ಷಣದಲ್ಲೇ ಸವಿತಾ ಸಾವನ್ನಪ್ಪಿದ್ದಾರೆ. ತಾಯಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶಗೊಂಡ ಮೃತಳ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಮೃತ ಸವಿತಾ ಎರಡು ವರ್ಷಗಳ ಹಿಂದೆ ಬೈರಾಪುರದ ರಮೇಶ್ ಅವರನ್ನು ಮದುವೆಯಾಗಿದ್ದರು. ಚೊಚ್ಚಲ ಗರ್ಭಿಣಿಯಾಗಿದ್ದ ವೇಳೆ ಆಕೆಯ ರೆಗ್ಯೂಲರ್ ಚೆಕ್ ಆಪ್ ಅನ್ನು ಖಾಸಗಿ ಆಸ್ಪತ್ರೆಯಲ್ಲಿ ಮಾಡಿಸಲಾಗುತ್ತಿತ್ತು. ಗುರುವಾರದಂದು ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ದೊಡ್ಡಬಳ್ಳಾಪುರದ ತಾಯಿ ಮಗು ಆಸ್ಪತ್ರೆಗೆ ದಾಖಲು ಮಾಡಲಾಯಿತು. ತಾಯಿ ಹೊಟ್ಟೆಯಲ್ಲಿದ್ದ ಮಗು ಆಧಿಕ ತೂಕ ಇದ್ದ ಹಿನ್ನೆಲೆ ಸಹಜ ಹೆರಿಗೆ ಅಸಾಧ್ಯವಾಗಿತ್ತು.

ಆದರೆ, ವೈದ್ಯರು ಸಹಜ ಹೆರಿಗೆ ಆಗುತ್ತೆ ಎಂದು ಇಲ್ಲಿಯೇ ಉಳಿಸಿಕೊಂಡಿದ್ದಾರೆ. ಬೆಳಗ್ಗೆ 9ಗಂಟೆ ಸಮಯದಲ್ಲಿ ಹೆರಿಗೆಯಾದ ನಂತರ ಗರ್ಭಕೋಶದಲ್ಲಿ ತೀರ್ವ ರಕ್ತಸ್ರಾವ ಆಗಿ ಆರೋಗ್ಯದಲ್ಲಿ ಏರುಪೇರಾಗಿದೆ. ನಂತರ ವೈದ್ಯರು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ಆದರೆ ಅವರು ಬೇರೆ ಆಸ್ಪತ್ರೆ ಹೋಗುವ ಮುನ್ನವೇ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ಮೃತಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ, ಹೊಟ್ಟೆಯಲ್ಲಿದ್ದ ಮಗು 4 ಕೆಜಿಗೂ ಹೆಚ್ಚು ತೂಕ ಇದ್ದು, ಹೆರಿಗೆ ಮಾಡಿಸೋದು ಸವಾಲಿನ ಕೆಲಸವಾಗಿತ್ತು, ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿದ್ದರೆ ನಾವು ಕರೆದುಕೊಂಡು ಹೋಗುತ್ತಿದ್ದೆವು. ಆದರೆ, ವೈದ್ಯರು ಇಲ್ಲಿಯೇ ಹೆರಿಗೆ ಮಾಡುವುದಾಗಿ ಧೈರ್ಯ ತುಂಬಿ ಕೊನೆಗೆ ಆಕೆಯ ಜೀವ ತೆಗೆದಿದ್ದಾರೆ.

ಹುಟ್ಟಿದ ಕ್ಷಣದಲ್ಲೇ ಮಗುವಿಗೆ ತಾಯಿ ಇಲ್ಲದಂತೆ ಮಾಡಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಸವಿತಾಳ ಸಾವಿಗೆ ಕಾರಣರೆಂದು ಆರೋಪಿಸಿ ಅಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು. ನಂತರ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

5 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

5 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

5 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

6 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

7 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

8 hours ago