ಸಿಎಂ ಪರಿಹಾರ ನಿಧಿಗೆ ದಾಖಲೆ ಸಲ್ಲಿಸಲು ಸೂಚನೆ: ಕೆ.ಶ್ರೀನಿವಾಸ್

ಬೆಂಗಳೂರು ಗ್ರಾಮಾಂತರ: ಮುಖ್ಯಮಂತ್ರಿ ಪರಿಹಾರ ನಿಧಿಯಡಿ ಪರಿಹಾರ ಕೋರಿ ಸಲ್ಲಿಕೆಯಾಗುವ ಅರ್ಜಿಗಳೊಂದಿಗೆ ಸಮರ್ಪಕ ದಾಖಲೆಗಳನ್ನು ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪರಿಹಾರ ಕೋರಿ, ಸಚಿವರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ತು ಸದಸ್ಯರು ಹಾಗೂ ಲೋಕಸಭಾ ಸದಸ್ಯರುಗಳ ಕಚೇರಿಗಳಿಂದ ಸಲ್ಲಿಕೆಯಾಗುತ್ತಿರುವ ಬಹುತೇಕ ಆರ್ಜಿಗಳು ಸಮರ್ಪಕವಲ್ಲದ ದಾಖಲಾತಿಗಳೊಂದಿಗೆ ಸಲ್ಲಿಕೆಯಾಗುತ್ತಿರುವುದರಿಂದ ಶೀಘ್ರಗತಿಯಲ್ಲಿ ಕಡತ ವಿಲೇವಾರಿ ಮಾಡಲು ತೊಂದರೆಯಾಗುತ್ತಿದೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅರ್ಜಿದಾರರ ಭಾವಚಿತ್ರ, ಬಿ.ಪಿ.ಎಲ್. ಪಡಿತರ ಚೀಟಿ, ಆಧಾರ್ ಗುರುತಿನ ಚೀಟಿ (ಅರ್ಜಿದಾರರ ಬ್ಯಾಂಕ್ ಖಾತೆಯ ಆಧಾರ್ ಗುರುತಿನ ಸಂಖ್ಯೆಯೊಂದಿಗೆ ಜೋಡಣೆ ಆಗಿರಬೇಕು.), ಅರ್ಜಿದಾರರು ಚಿಕಿತ್ಸೆ ಪಡೆದಿದ್ದಲ್ಲಿ ಚಿಕಿತ್ಸೆ ಪಡೆದಿರುವ ಆಸ್ಪತ್ರೆಯ ಮೊಹರು ಮತ್ತು ಸಹಿ ಹೊಂದಿರುವ ಆಸ್ಪತ್ರೆಯ ಅಂತಿಮ ಮೂಲ ಬಿಲ್ಲು, ಆಸ್ಪತ್ರೆಯ ಬಿಡುಗಡೆ ಸಾರಾಂಶ ಪತ್ರ, ಚಿಕಿತ್ಸೆ ಪಡೆಯಬೇಕಾದಲ್ಲಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚದ ಅಂದಾಜು ಪಟ್ಟಿ, ಅರ್ಜಿದಾರರು ಬ್ಯಾಂಕ್ ಖಾತೆ ಹೊಂದಿರುವ ಪಾಸ್ ಪುಸ್ತಕದ ಮೊದಲ ಪ್ರತಿ, ಅರ್ಜಿದಾರರ ಅಥವಾ ಅವರ ಕುಟುಂಬ ವರ್ಗದವರ ಬಳಕೆಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ

Swathi MG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

38 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

56 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

1 hour ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago