ಬೆಂಗಳೂರು ಗ್ರಾಮಾಂತರ

ಹೊಸಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವಕ ನೇಣಿಗೆ ಶರಣು

ಹೊಸಕೋಟೆ : ವಿವಾಹ ಆಗಬೇಕಿದ್ದ ಯುವತಿ ತನ್ನ ಜೊತೆ ಸರಿಯಾಗಿ ಮಾತನಾಡುತ್ತಿಲ್ಲ ಎಂದು ಕ್ಷುಲ್ಲಕ ಕಾರಣಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಲೂಕಿನ ನಂದಗುಡಿಯ ನಿವಾಸಿ ಹೋಮ್‌ ಗಾರ್ಡ್‌ ತೌಸೀಪ್‌ ಪಾಷ (27) ಮೃತ ದುರ್ದೈವಿ. ನಿಶ್ಚಿತಾರ್ಥವಾಗಿದ್ದ ಹುಡುಗಿ ಫೋನ್‌ನಲ್ಲಿ ಮಾತನಾಡುವಂತೆ ಭಯ ಹುಟ್ಟಿಸಲು ಹೋಗಿ ನೇಣಿಗೆ ಶರಣಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ನಂದಗುಡಿ ಪೊಲೀಸ್‌ ಠಾಣೆಯಲ್ಲಿ ಹೋಮ್‌ ಗಾರ್ಡ್‌ ಆಗಿ ಕಳೆದ 4 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ತೌಸೀಪ್‌ ಪಾಷ ಜೊತೆ ಹೊಸಕೋಟೆ ಮೂಲದ ಹುಡುಗಿಯೊಂದಿಗೆ ವಿವಾಹ ನಿಶ್ಚಿತಾರ್ಥವಾಗಿತ್ತು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹುಡುಗಿಗೆ ಕರೆ ಮಾಡಿದ್ದು, ಫೋನ್‌ನಲ್ಲಿ ಮಾತನಾಡಲು ತಡ ಮಾಡಿದಕ್ಕೆ ವಿಡಿಯೋ ಕಾಲ್‌ ಮಾಡಿ “ನೀನು ಮಾತನಾಡಲಿಲ್ಲ ಎಂದರೆ ಫ್ಯಾನ್‌ಗೆ ನೇಣು ಹಾಕಿಕೊಳ್ಳುವೆ’ ಎಂದು ಹೇಳಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.

ವಿಷಯ ತಿಳಿದ ಹುಡುಗಿ ಕಡೆಯವರು ನಂದಗುಡಿ ಪೊಲೀಸ್‌ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

3 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

4 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

4 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

4 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

5 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

5 hours ago