ಬೆಂಗಳೂರು ಗ್ರಾಮಾಂತರ: ಬಿಜ್ಜವಾರ ಸರ್ಕಾರಿ ಶಾಲೆ ಜಮೀನು ಒತ್ತುವರಿ ತೆರವು

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲ್ಲೂಕಿನ ಬಿಜ್ಜವಾರ ಗ್ರಾಮದ ಸರ್ವೇ ನಂಬರ್ 16 ರಲ್ಲಿ ಒತ್ತುವರಿಯಾಗಿದ್ದ ಸರ್ಕಾರಿ ಶಾಲಾ ಜಮೀನನ್ನು ಬುಧವಾರ ಜಿಲ್ಲಾಡಳಿತ ತೆರವುಗೊಳಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರ ಸೂಚನೆ ಮೇರೆಗೆ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಮತ್ತು ಭೂ ದಾಖಲೆಗಳ ಇಲಾಖೆಯ ಉಪನಿರ್ದೇಶಕರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಿಜ್ಜವಾರ ಗ್ರಾಮದ ಸರ್ವೇ ನಂಬರ್ 16ರಲ್ಲಿ ಸ್ಥಳೀಯ ರೈತರೊಬ್ಬರಿಂದ ಅತಿಕ್ರಮಣವಾಗಿದ್ದ ಒಂದು ಎಕರೆ ಜಾಗವನ್ನು ಸಮೀಕ್ಷೆ ನಡೆಸಿ ತೆರವುಗೊಳಿಸಿದ್ದಾರೆ.

ಬಿಜ್ಜವಾರ ಗ್ರಾಮದ ಸರ್ವೇ ನಂಬರ್ 16 ರಲ್ಲಿ ಸರ್ಕಾರಿ ಶಾಲೆಗೆ ಒಟ್ಟು ಆರು ಎಕರೆ, ಮುವತ್ತಾಮ್ಮೂರು ಗುಂಟೆ ಭೂಮಿ ಮಂಜೂರಾಗಿತ್ತು. ಅದರಲ್ಲಿ ಒಂದು ಎಕರೆ ಭೂಮಿ ಒತ್ತುವರಿಗೊಂಡಿತ್ತು. ಕೋರಮಂಗಲ ಗ್ರಾಮದಲ್ಲಿ ಕಳೆದ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಹಾಗೂ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಸ್ಥಳೀಯ ರೈತರ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಯವರಿಗೆ ಬಿಜ್ಜವಾರ ಗ್ರಾಮದ ಸರ್ಕಾರಿ ಶಾಲಾ ಜಮೀನು ಒತ್ತುವರಿ ತೆರವುಗೊಳಿಸುವಂತೆ ಅರ್ಜಿ ಸಲ್ಲಿಕೆಯಾಗಿತ್ತು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago