News Karnataka Kannada
Tuesday, May 07 2024
ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ: ವಿವಿಧೆಡೆ ಕೆಲಸ ಮಾಡುತ್ತಿದ್ದ ಐವರು ಬಾಲ ಕಾರ್ಮಿಕರ ರಕ್ಷಣೆ

Bengaluru Rural: Five child labourers working at various places rescued
Photo Credit : By Author

ಬೆಂಗಳೂರು ಗ್ರಾಮಾಂತರ: ವಿವಿಧ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಐದು ಮಂದಿ ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅರಿವು ಕಾರ್ಯಕ್ರಮ ಹಾಗೂ ಕಾರ್ಯಾಚರಣೆ ನಡೆಸಿದ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಐವರು ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಪಟ್ಟಣದಲ್ಲಿ ನಡೆದ ಬಾಲಕಾರ್ಮಿಕರ ಕಾರ್ಯಾಚರಣೆ ವೇಳೆ 14 ವರ್ಷಕ್ಕಿಂತ ಕಡಿಮೆ ಇರುವ 01 ಬಾಲ ಹಾಗೂ 04 ಕಿಶೋರರನ್ನು ರಕ್ಷಿಸಿ, ದೊಡ್ಡಬಳ್ಳಾಪುರದ ಸ್ನೇಹ ಭಾರತಿ ಎಜುಕೇಷನ್ ಟ್ರಸ್ಟ್ ನಲ್ಲಿ ತಾತ್ಕಾಲಿಕ ಪುನರ್ವಸತಿಯನ್ನು ಕಲ್ಪಿಸಲಾಯಿತು, ಅಲ್ಲದೆ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ. ಮಕ್ಕಳನ್ನು ದುಡಿಮೆಗೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಕಾನೂನು ಕ್ರಮಜರುಗಿಸಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್.ಎಸ್ ಅವರು ತಿಳಿಸಿದ್ದಾರೆ.

ಇನ್ನು ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20ಸಾವಿರ ರೂ.ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಕಾರ್ಯಾಚರಣೆ ವೇಳೆ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ.ಹೆಚ್.ಆರ್ ಅವರು ತಿಳಿಸಿದ್ದಾರೆ.

ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯ ವೇಳೆ ವಿವಿಧ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ಸೂಚಿಸಲಾಯಿತು.

ಕಾರ್ಯಾಚರಣೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕ ದಯನಂದ್ ಸಾಗರ್, ಶಿಕ್ಷಣ ಇಲಾಖೆಯ ಇ.ಸಿ.ಒ. ಶಿವಕುಮಾರ್, ಮಕ್ಕಳ ಸಹಾಯವಾಣಿಯ ಜಿಲ್ಲಾ ಸಂಯೋಜಕ ಮಂಜುನಾಥ.ಎಸ್.ಪಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕರದ ಸಿಬ್ಬಂದಿ ಶಿವಪ್ಪ, ಪೊಲೀಸ್ ಇಲಾಖೆಯ ನಾಗರಾಜ ಹಾಗೂ ಅನಂತ ಕುಮಾರ್ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು