ಬೆಂಗಳೂರು ಗ್ರಾಮಾಂತರ: ದೌರ್ಜನ್ಯ ಪ್ರಕರಣ ಶೀಘ್ರ ಇತ್ಯರ್ಥಪಡಿಸಿ – ಎಡಿಸಿ

ಬೆಂಗಳೂರು ಗ್ರಾಮಾಂತರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆದಿರುವ, ದೌರ್ಜನ್ಯ ಪ್ರಕರಣಗಳು ಸೇರಿದಂತೆ ಇನ್ನಿತರ ಪ್ರಕರಣಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶೀಘ್ರವಾಗಿ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಂಡು, ಇತ್ಯರ್ಥಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯ.ಈ. ರವಿಕುಮಾರ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 2ನೇ ತ್ರೈಮಾಸಿಕ  ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ತಾಲ್ಲೂಕುಗಳಲ್ಲಿ ನಿಗದಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸಭೆಗಳನ್ನು ನಡೆಸಬೇಕು ಎಂದರಲ್ಲದೆ, ಸಭೆಗಳನ್ನು ನಡೆಸುವುದರಿಂದ ಹಲವಾರು ದೌರ್ಜನ್ಯದಂತಹ ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದುದಾಗಿದೆ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಬೇಕು ಎಂದು ಹೇಳಿದರಲ್ಲದೆ  ಫಲಾನುಭವಿಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸುವ ಮುನ್ನ, ಫಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡಗಳನ್ನು ಅನುಸರಿಸಬೇಕು ಎಂದರು.

ಜಿಲ್ಲಾ ಜಾಗೃತಿ ಸಮಿತಿ ಸದಸ್ಯರುಗಳು ಕಳೆದ ಸಭೆಯಲ್ಲಿ ಮಾಡಿದ್ದ ಮನವಿಗೆ ಸ್ಪಂದಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಘಟನೆಗಳ ಹೋರಾಟಗಾರರೊಬ್ಬರನ್ನು ಸನ್ನಡತೆ ಆಧಾರದ ಮೇಲೆ ರೌಡಿಶೀಟರ್ ಪಟ್ಟಿಯಿಂದ ತೆಗೆದು ಹಾಕಿರುವುದಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರಿಗೆ ಸದಸ್ಯರು ಧನ್ಯವಾದ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೋನ ವಂಶಿ ಕೃಷಿ, ಎರಡನೇ ಸತ್ರ ನ್ಯಾಯಾಲಯ ಸಾರ್ವಜನಿಕ ಅಭಿಯೋಜಕ ಎಸ್.ಬಿ.ಹಾವೇರಿ, ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನರಸಿಂಹಮೂರ್ತಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಕೇಶ್, ಸೇರಿದಂತೆ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರುಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ಡಿವೈಎಸ್ಪಿಗಳು, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರುಗಳು ಉಪಸ್ಥಿತರಿದ್ದರು.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago