ಬೆಂಗಳೂರು ಗ್ರಾಮಾಂತರ: ಪೌರ ಕಾರ್ಮಿಕರ ಸಮಸ್ಯೆ ಶೀಘ್ರ ಬಗೆಹರಿಸಿ ಎಂದ ಶಿವಣ್ಣ.ಎಂ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಪೌರ ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದು, ಗೌರವಯುತ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಸಮಾನತೆ ಹಾಗೂ ನೆಮ್ಮದಿಯುತ ಜೀವನ ನಡೆಸಲು ನೆರವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಪೌರ ಕಾರ್ಮಿಕರ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ(ಕೋಟೆ) ಅವರು ತಿಳಿಸಿದರು.

ದೇವನಹಳ್ಳಿಯ ಎಸ್‌ಟಿಪಿ ಪ್ಲಾಂಟ್‌ಗೆ ಭೇಟಿ ನೀಡಿ ಪರಿಶೀಲಿಸಿ ಹಾಗೂ ದೇವನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಕುಂದುಕೊರತೆಗಳ ಬಗ್ಗೆ ಪೌರಕಾರ್ಮಿಕರು, ಮುಖಂಡರು ಮತ್ತು ಅಧಿಕಾರಿಗಳೊಡನೆ ದೇವನಹಳ್ಳಿ ಪುರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಸಭೆ ನಡೆಸಿ ಅವರು ಮಾತನಾಡಿ, ಪೌರ ಕಾರ್ಮಿಕರಿಲ್ಲದೇ ಸ್ವಚ್ಛತೆಯ ನಿರ್ವಹಣೆ ಸಾಧ್ಯವಿಲ್ಲ. ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಕೊಡುಗೆ ಅಪಾರವಾದದ್ದು. ಕೋವಿಡ್ ಸಮಯದಲ್ಲಿ ಸ್ವಂತ ಕುಟುಂಬವನ್ನೇ ಮರೆತು ಪೌರಕಾರ್ಮಿಕರು ನಗರದ ಸ್ಯಾನಿಟೈಸ್ ಮಾಡುವ ಮೂಲಕ ಸ್ವಚ್ಚತೆ ಕಾಪಾಡುವ ಕಾರ್ಯದಲ್ಲಿ ನಿರತರಾಗಿ, ವಾರಿಯರ್‌ಗಳಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಾರೆ ಎಂದರು.

ಪೌರ ಕಾರ್ಮಿಕರು ತಮಗೆ ಅಗತ್ಯ ಇರುವ ಸೌಲಭ್ಯಗಳಿಗಾಗಿ ಹಿಂಜರಿಯದೇ ಕೇಳಿ ಪಡೆದುಕೊಳ್ಳಬೇಕು. ಪೌರ ಕಾರ್ಮಿಕರು ಮುಖ್ಯವಾಗಿ ತಮ್ಮ ಆರೋಗ್ಯದ ಕುರಿತು ಗಮನಹರಿಸಬೇಕು ಯಾವುದೇ ರೀತಿಯ ದುಶ್ಚಟಗಳಿಗೆ ಒಳಗಾಗದೆ ಆರೋಗ್ಯಯುತ ಜೀವನ ನಡೆಸಿ ಹಾಗೂ ನಗರಸಭೆ ಮತ್ತು ಪುರಸಭೆಯ ವತಿಯಿಂದ ಆಭಾ ಕಾರ್ಡನ್ನು ಪಡೆದು ಉಚಿತ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಿ, ನಿಮ್ಮ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಹೆಚ್ಚು ಮಹತ್ವವನ್ನು ನೀಡಿ ಎಂದು ತಿಳಿಸಿದರು.

ಪೌರ ಕಾರ್ಮಿಕರ ಶ್ರಮದಿಂದಾಗಿ ಪಟ್ಟಣದಲ್ಲಿ ರೋಗರುಜಿನ ನಿಯಂತ್ರಣವಾಗುತ್ತಿದೆ. ಪೌರ ಕಾರ್ಮಿಕರಿಗೆ ಜೀವ ವಿಮೆ ಮಾಡಿಸುವ ಮೂಲಕ ಸರ್ಕಾರ ಅವರಿಗೆ ಜೀವನ ಭದ್ರತೆ ಕಲ್ಪಿಸಿದೆ. ಗ್ಲೌಸ್, ಮಾಸ್ಕ್ ಇನ್ನಿತರ ಸುರಕ್ಷತಾ ಪರಿಕರಗಳನ್ನು ಒದಗಿಸುತ್ತಿದೆ. ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಪೌರ ಕಾರ್ಮಿಕರು ಅರ್ಜಿ ಸಲ್ಲಿಸಿದಾಗ ಸಂಬಂಧಿಸಿದ ಇಲಾಖೆಗಳೇ ಮುತುವರ್ಜಿ ವಹಿಸಿ, ನೈಜ ಫಲಾನುಭವಿಗಳಿಗೆ ಶೀರ್ಘವಾಗಿ ನಿಗದಿತ ಅವಧಿಯಲ್ಲಿ ಸೇವೆ ತಲುಪುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪೌರ ಕಾರ್ಮಿಕರಿಗೆ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಬೇಕು ಎಂದರಲ್ಲದೆ, ಯಾವೊಬ್ಬ ಅರ್ಹ ಫಲಾನುಭವಿಯು ಇದರಿಂದ ವಂಚಿತರಾಗಬಾರದು ಎಂದರು.

ಪೌರ ಕಾರ್ಮಿಕರಿಗೆ ಅತಿಮುಖ್ಯವಾಗಿ ಮೂಲಭೂತ ಸೌಕರ್ಯಗಳಾದ ಮನೆ ನಿರ್ಮಾಣಕ್ಕೆ ಹಣಕಾಸು ಸಹಾಯ ಸೇರಿದಂತೆ ಅವರ ಮಕ್ಕಳಿಗೆ ಶಿಕ್ಷಣ, ಸ್ಕಾಲರ್‌ಶಿಪ್ ಹೀಗೂ ಉನ್ನತ ಶಿಕ್ಷಣಕ್ಕೆ ಬೇಕಾದ ಸೌಲಭ್ಯ ಸೇರಿದಂತೆ ಆರೋಗ್ಯ ಸೌಲಭ್ಯಗಳನ್ನು ಸಹ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪೌರಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ, ಆಹಾರ ಹಾಗೂ ಅವರ ಕುಟುಂಬಕ್ಕೆ ಶೈಕ್ಷಣಿಕ ಸೌಲಭ್ಯದಂತಹ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಸೌಲಭ್ಯದ ಮಾಹಿತಿ ಇಲ್ಲದವರು, ವಂಚಿತರು ತಮ್ಮ ಹಕ್ಕನ್ನು ಕೇಳಿಪಡೆಯುವ ಮೂಲಕ ಸಬಲೀಕರಣಗೊಳ್ಳಬೇಕು ಹಾಗೂ ಪೌರ ಕಾರ್ಮಿಕರಿಗೆ ಕಿರುಕುಳ ನೀಡಿದ ನಗರಸಭೆ, ಪುರಸಭೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ಗೋಪಮ್ಮ, ಬೆಂಗಳೂರು ಗ್ರಾಮಾಂತರ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಸಮಾಜ ಕಲ್ಯಾಣ ಇಲಾಖೆಯ ದೇವನಹಳ್ಳಿ ತಾಲ್ಲೂಕು ಸಹಾಯಕ ನಿರ್ದೇಶಕ ಉಮಾಪತಿ ಸೇರಿದಂತೆ ಪೌರಕಾರ್ಮಿಕರು ಉಪಸ್ಥಿತರಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago