ಆನೇಕಲ್: ಆಟವಾಡುತಿದ್ದ ಒಂದೂವರೆ ವರ್ಷದ ಮಗು, ಆಕಸ್ಮಿಕವಾಗಿ ತಂದೆ ಚಾಲನೆ ಮಾಡುತ್ತಿದ್ದ ವಾಹನಕ್ಕೇ ಬಲಿಯಾದ ಘಟನೆ ಸರ್ಜಾಪುರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ಸಂಭವಿಸಿದೆ.
ಬಾಲಕೃಷ್ಣ ಇಚರ್ ವಾಹನ ಚಾಲಕರಾಗಿದ್ದರು. ಮನೆ ಬಳಿ ವಾಹನ ರಿವರ್ಸ್ ತೆಗೆದುಕೊಳ್ಳಲು ಹೋದಾಗ ಆಕಸ್ಮಿಕವಾಗಿ ಮಗಳು ಮನಿಶಾ ದೇವಿ ವಾಹನಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದಳು. ಕೂಡಲೇ ಮಗುವನ್ನ ಆಸ್ಪತ್ರೆಗೆ ರವಾನಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಮನಿಶಾ ಆಶ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ. ಸರ್ಜಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.