ಬೆಂಗಳೂರು ಗ್ರಾಮಾಂತರ

ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಂಟೈನರ್: 20 ಎಲೆಕ್ಟ್ರಾನಿಕ್ ಬೈಕ್​ಗಳು ಭಸ್ಮ

ಬೆಂಗಳೂರು ಗ್ರಾಮಾಂತರ: ರಾಜ್ಯ ಗಡಿಭಾಗ ತಮಿಳುನಾಡಿನ ಥಳಿರಸ್ತೆಯ ಉಳಿವೀರಹಳ್ಳಿಯಲ್ಲಿ ಎಲೆಕ್ಟ್ರಾನಿಕ್ ಬೈಕ್ ಸಾಗಿಸುತ್ತಿದ್ದ ಕಂಟೈನರ್​ಗೆ ಬೆಂಕಿ ತಗುಲಿ ಕಂಟೈನರ್ ಜೊತೆಗೆ 20 ಎಲೆಕ್ಟ್ರಾನಿಕ್ ಬೈಕ್​ಗಳು ಬೆಂಕಿಗಾಹುತಿಯಾದ ಘಟನೆ  ನಡೆದಿದೆ.

ಕಂಪನಿಯಿಂದ 40 ಎಲೆಕ್ಟ್ರಾನಿಕ್ ಬೈಕ್​ಗಳನ್ನು ತುಂಬಿಕೊಂಡು ಬರುತ್ತಿದ್ದ ವಾಹನ, ಬೆಂಗಳೂರಿನ ಜಯನಗರ ಶೋ ರೂಮ್​ಗೆ ಬರಬೇಕಿತ್ತು. ಆದರೆ, ಮಾರ್ಗ ಮಧ್ಯೆ ರಸ್ತೆಯಲ್ಲಿಯೇ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ತಗುಲಿದ ಕೂಡಲೇ ಕಂಟೈನರ್ ಧಗದಧಗನೆ ಹೊತ್ತಿ ಉರಿದಿದ್ದು. ವಾಹನದಲ್ಲಿದ್ದ 40 ಎಲೆಕ್ಟ್ರಾನಿಕ್ ಬೈಕ್​ಗಳ ಪೈಕಿ 20 ಬೈಕ್​ಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ಕುರಿತು ಮತ್ತಿಗೆರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ashika S

Recent Posts

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

12 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

24 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago