ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಬೆಂಗಳೂರು ಗ್ರಾಮಾಂತರ: ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಈ ವೇಳೆ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯಿದ್ದು ಎಚ್ಚರಿಕೆ ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳುವುದು. ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕೆಂದು ಎಲ್ಲಾ ವೃತ್ತದ ಮೇಲ್ವಿಚಾರಿಕಿಯವರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಮನವಿ ಮಾಡಿದ್ದಾರೆ.

ಜಿಲ್ಲೆಯ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆಗಳಿರುವಂತಹ ಪ್ರಸಿದ್ದ ದೇವಸ್ಥಾನಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ, ಮಧುರೆ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆ, ದೇವಹಳ್ಳಿ ತಾಲ್ಲೂಕಿನ ತಿಮ್ಮರಾಯಸ್ವಾಮಿ ಬೆಟ್ಟ(ಅವತಿ) ಹಾಗೂ ಹೊಸಕೋಟೆ ತಾಲ್ಲೂಕಿನ ಶ್ರೀ ಕಾಳಬೈರವ ದೇವಸ್ಥಾನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿಯ ಮದ್ದೂರಮ್ಮ ದೇವಸ್ಥಾನದ ಮುಖ್ಯಸ್ಥರಿಗೆ ಸಾಮೂಹಿಕ ವಿವಾಹಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಯಾವುದೇ ಬಾಲ್ಯವಿವಾಹಗಳಿಗೆ ಅವಕಾಶ ಮಾಡಿಕೊಡಬಾರದೆಂದು ಬಾಲ್ಯವಿವಾಹ ಕಾಯ್ದೆಯ ಕುರಿತು ಅವರಿಗೆ ತಿಳಿಸಿ, ಅರಿವು ಮೂಡಿಸುವಂತೆ ಸೂಚಿಸಿದ್ದಾರೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago