News Karnataka Kannada
Sunday, April 28 2024
ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ: ದೊಡ್ಡಬೆಳವಂಗಲದಲ್ಲಿ ಮತದಾನದ ಅರಿವು ಕಾರ್ಯಕ್ರಮ

Voter awareness programme at Doddabelawangala
Photo Credit : By Author

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೈಕ್ ರಾಲಿಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ನಾಗರಾಜು ಅವರು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು.

ಮತದಾನದ ಶೇಕಡವಾರು ಪ್ರಮಾಣ ಹೆಚ್ಚಾಗಬೇಕಿದ್ದು, ಯಾವುದೇ ಆಸೆ ಆಮಿ?ಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಹಕರಿಸಬೇಕೆಂದು ಉಪಕಾರ್ಯದರ್ಶಿ ಅವರು ತಿಳಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಅವರು ಮಾತನಾಡಿ ಮುಂಬರುವ ಚುನಾವಣೆಯಲ್ಲಿ ಶೇ. 100ರಷ್ಟು ಮತದಾನ ವಾಗಬೇಕಿದ್ದು, 18ವರ್ಷ ಮೇಲ್ಪಟ್ಟ ಎಲ್ಲರೂ ನೋಂದಾಯಿಸಿಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸಬೇಕೆಂದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತದಾನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.

ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನಕುಮಾರಿ, ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ ಅವರು, ದೊಡ್ಡಬೆಳವಂಗಲ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಓಗಳು, ಕಾರ್ಯದರ್ಶಿಗಳು, ಎಸ್.ಡಿ.ಎ.ಎ, ಕರವಸೂಲಿಗಾರರು, ಡಿಇಓಗಳು, ಜಲಗಾರರು, ಕೃಷಿ, ತೋಟಗಾರಿಕೆ, ರೇಷ್ಮೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗಳ ಹೋಬಳಿ ಮಟ್ಟದ ಅಧಿಕಾರಿಗಳು ಮತ್ತು ನರೇಗಾ ಸಿಬ್ಬಂದಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು