ಬೆಂಗಳೂರು: ಇಂದು ಗೃಹಜ್ಯೋತಿ, ಅನ್ನಭಾಗ್ಯಕ್ಕೆ ಅಧಿಕೃತ ಚಾಲನೆ

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳಾದ ಗೃಹಜ್ಯೋತಿ ಮತ್ತು ಅನ್ನಭಾಗ್ಯಕ್ಕೆ ಶನಿವಾರ ಅಧಿಕೃತ ಚಾಲನೆ ದೊರೆಯಲಿದೆ.

ಬಿಪಿಎಲ್‌ ಪಡಿತರ ಚೀಟಿ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ ‘ಅನ್ನಭಾಗ್ಯ’ ಯೋಜನೆ ಅಡಿ ತಲಾ 10 ಕೆ.ಜಿ. ಅಕ್ಕಿ ವಿತರಿಸುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ, ಯೋಜನೆಗೆ ಅಕ್ಕಿ ಹೊಂದಿಸಲು ಸಾಧ್ಯವಾಗಿಲ್ಲ. ಹೀಗಾಗಿ, ಬಿಪಿಎಲ್ ಕುಟುಂಬದ ಒಬ್ಬೊಬ್ಬರಿಗೂ ತಲಾ 5 ಕೆ.ಜಿ ಅಕ್ಕಿ ಹಾಗೂ ಬಾಕಿ 5 ಕೆ.ಜಿ ಅಕ್ಕಿ ಬದಲು ರೂ.170 ಅನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಜಮಾ ಮಾಡಲು ಸರ್ಕಾರ ತೀರ್ಮಾನಿಸಿದೆ.

ಒಂದು ಕುಟುಂಬದಲ್ಲಿ ಐವರು ಸದಸ್ಯರು ಇದ್ದರೆ ಒಟ್ಟು 25 ಕೆ.ಜಿ ಅಕ್ಕಿಗೆ ತಗಲುವ ವೆಚ್ಚ ರೂ.850 ಅನ್ನು ಕುಟುಂಬದ ಮುಖ್ಯಸ್ಥನ ಖಾತೆಗೆ ಜಮೆ ಮಾಡಲಾಗುತ್ತದೆ. 85 ಲಕ್ಷ ಬಿಪಿಎಲ್‌ ಕುಟುಂಬಗಳ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ.

ಜೊತೆಗೆ, ಗೃಹಬಳಕೆಯ ವಿದ್ಯುತ್‌ಗೆ ಗರಿಷ್ಠ 200 ಯೂನಿಟ್‌ವರೆಗೆ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆ ಸಹ ಶನಿವಾರದಿಂದ ಆರಂಭವಾಗಲಿದೆ.

ಈ ಯೋಜನೆಗೆ ಜೂನ್ 18ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ರಾಜ್ಯದ ಆರು ವಿದ್ಯುತ್‌ ಕಂಪನಿಗಳ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ 7ರವರೆಗೆ 86.24 ಲಕ್ಷಕ್ಕೂ ಅಧಿಕ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿಗೆ ಗಡುವು ವಿಧಿಸಿಲ್ಲ.

ರಾಜ್ಯದಲ್ಲಿನ 2.14 ಕೋಟಿ ಕುಟುಂಬಗಳು ಈ ಯೋಜನೆ ವ್ಯಾಪ್ತಿಗೆ ಒಳಪಡಲಿವೆ. ಜುಲೈ ತಿಂಗಳಲ್ಲಿ ಬಳಸಿದ ವಿದ್ಯುತ್‌ ಆಗಸ್ಟ್‌1ರಿಂದ ನೀಡುವ ಬಿಲ್‌ಗೆ ಸೇರ್ಪಡೆಯಾಗುವ ರೀತಿಯಲ್ಲಿ ಯೋಜನೆ ಜಾರಿಯಾಗಲಿದೆ.

Ashika S

Recent Posts

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

36 seconds ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

19 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

24 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

38 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

45 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

55 mins ago