ಬೆಂಗಳೂರು: ಡಿ.16ರವರೆಗೆ ಕರ್ನಾಟಕದಲ್ಲಿ ಮಳೆ, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ಡಿಸೆಂಬರ್ 16ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ನೆರೆಯ ರಾಜ್ಯಗಳಲ್ಲಿ ‘ಮಾಂಡೌಸ್’ ಚಂಡಮಾರುತ ದುರ್ಬಲವಾಗಿದ್ದರೂ, ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ ಮತ್ತು ಯಾವುದೇ ಹಾನಿಯನ್ನು ತಪ್ಪಿಸಲು ಅಧಿಕಾರಿಗಳು ಇಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸರಾಸರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸಹ ಮಳೆಯಿಂದ ಬಾಧಿತವಾಗುವ ಸಾಧ್ಯತೆಯಿದೆ. ಕೇಂದ್ರ ಜಿಲ್ಲೆಗಳಾದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲೂ ಮಳೆಯಾಗಲಿದೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಬೆಳೆ ನಷ್ಟದ ಭೀತಿಯಲ್ಲಿದ್ದಾರೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮತ್ತು ನಿರಂತರ ಮಳೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಸೋಮವಾರ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಏತನ್ಮಧ್ಯೆ, ಬೆಂಗಳೂರಿನಲ್ಲಿ ಚಳಿ ಮತ್ತು ಮಳೆ ಹವಾಮಾನದಿಂದಾಗಿ ಅನೇಕ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ.

Ashika S

Recent Posts

ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಅಭಿಯಾನ

ಜಿಲ್ಲೆಯ ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಮೇ8ರಂದು ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ.

6 mins ago

ಪೆನ್‌ಡ್ರೈವ್‌ ಪ್ರಕರಣದಲ್ಲಿ 3-4 ಆತ್ಮಹತ್ಯೆ : ಜೆಡಿಎಸ್‌ ನಾಯಕ ಸ್ಫೋಟಕ ಮಾಹಿತಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ಜೆಡಿಎಸ್‌ ನಾಯಕ, ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ಅವರು…

9 mins ago

ಪುಷ್ಪ ಸಿನಿಮಾ ಮಾಡಿ ನನ್ನ ಜೀವನ ಬದಲಾಗಿಲ್ಲ ಎಂದ ಬಹುಭಾಷಾ ನಟ ಫಾಹದ್ ಫಾಸಿಲ್

ಬಹುಭಾಷಾ ನಟ ಫಾಹದ್ ಫಾಸಿಲ್ ಪುಷ್ಪ ಸಿನಿಮಾದಿಂದ ನನ್ನ ಜೀವನ ಬದಲಾಗಿಲ್ಲ, ಪುಷ್ಪ ಮಾಡಿದ್ದಕ್ಕೆ ನನಗೇನು ಸಿಕ್ತು ಅನ್ನೋದು ತಪ್ಪು…

27 mins ago

ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ತಿರುಗೇಟು ನೀಡಿದ ಪ್ರಧಾನಿ

 ಸ್ಯಾಮ್ ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರನ್ನು ಅವರ ಬಣ್ಣದ ಆಧಾರದ ಮೇಲೆ…

28 mins ago

ʼಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ

ಕೊರೊನಾ ಲಸಿಕೆ ಕೋವಿಶೀಲ್ಡ್​ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್​ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ…

52 mins ago

ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿದರೆ ಕಠಿಣ ಕ್ರಮ: ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ಸಮುದಾಯ, ಜಾತಿ, ಧರ್ಮ, ವ್ಯಕ್ತಿಗಳ ವಿರುದ್ಧ ಉದ್ದೇಶ  ಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ…

1 hour ago