News Karnataka Kannada
Monday, May 13 2024
ಬೆಂಗಳೂರು

ಬೆಂಗಳೂರು: ಹತ್ತು ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಇಲ್ಲಿದೆ ನೋಡಿ ವಿವರ

NEP to be scrapped from next year: Siddaramaiah
Photo Credit : Facebook

ಬೆಂಗಳೂರು: 10 ಐಎಎಸ್​​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎನ್.ರವೀಂದ್ರ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ, ಕೆ.ಶ್ರೀನಿವಾಸ್ ಅವ್ರನ್ನ ತುಮಕೂರು ಜಿಲ್ಲಾಧಿಕಾರಿಯಾಗಿ, ಕೆ.ಎಂ.ಜಾನಕಿ ಅವರನ್ನ ಬಾಗಲಕೋಟೆ ಜಿಲ್ಲಾಧಿಕಾರಿ ಆಗಿ, ಮುಲ್ಲೈ ಮುಹಿಲನ್ ಅವರನ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಹಾಗೂ ಮಂಡ್ಯ ಡಿಸಿ ಆಗಿ ಡಾ.ಕುಮಾರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಪಲ್ಲವಿ ಆಕುರಾತಿ ಅವರನ್ನು ಹೆಚ್ಚುವರಿ ಯೋಜನಾ ನಿರ್ದೇಶಕಿ ಹಾಗೂ ಸಕಾಲ ಮಿಷನ್‌ಗೆ ವರ್ಗಾವಣೆ ಮಾಡಲಾಗಿದೆ.

ಡಾ. ಎಂ.ವಿ. ವೆಂಕಟೇಶ್ ಅವರನ್ನು ಪಶುಸಂಗೋಪನಾ ಇಲಾಖೆಯ ಆಯುಕ್ತರನ್ನಾಗಿ ನಿಯೋಜಿಸಿ ಆದೇಶ ಹೊರಡಿಸಿದೆ. ಇನ್ನುಳಿದಂತೆ ಎ.ಎಂ.ಯೋಗೇಶ್ ಅವರನ್ನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾಗಿ. ಜಿ.ಪ್ರಭು ಅವರನ್ನ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತರಾಗಿ ಮತ್ತು ನವೀನ್ ಕುಮಾರ್ ರಾಜುರನ್ನ ವಸತಿ ಶಿಕ್ಷಣ ಸೊಸೈಟಿ ಇಡಿ ಆಗಿ ಟ್ರಾನ್ಸ್‌ಫರ್ ಮಾಡಿದೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ.

ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿ ಇನ್ನು ಪ್ರಮುಖವಾಗಿ ಕರಾವಳಿ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ.ಪಿ.ಮುಲ್ಲೈ ಮುಹಿಲನ್ ಅವರನ್ನ ನಿಯೋಜಿಸಲಾಗಿದೆ. ದಕ್ಷಿಣ ಕನ್ನಡ ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ವರ್ಗಾವಣೆಯಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಮುಲ್ಲೈ ಮುಹಿಲನ್ ಅವರನ್ನು ನೇಮಕ ಮಾಡಲಾಗಿದೆ. 2013ರ ಸಾಲಿನ ಐಎಎಸ್‌ ಅಧಿಕಾರಿಯಾಗಿರುವ ಮುಲ್ಲೈ ಮುಹಿಲನ್ ಎಂ.ಪಿ.ಯವರು ಸದ್ಯ ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್‌ ಗವರ್ನೆನ್ಸ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್ ಅವರನ್ನು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಈ ಮೂಲಕ ಕಳೆದ 10 ದಿನದಲ್ಲಿ 2ನೇ ಬಾರಿಗೆ ಐಎಎಸ್ ಅಧಿಕಾರಿ ವರ್ಗಾವಣೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು