ಬೆಂಗಳೂರು: ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಗೊಂದಲಗಳಿಗೆ ಇಲ್ಲಿದೆ ಪರಿಹಾರ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ 200 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಆದಾಗ್ಯೂ, ಯೋಜನೆಯ ಬಗ್ಗೆ ಅನೇಕರಲ್ಲಿ ಇನ್ನೂ ಗೊಂದಲಗಳಿವೆ. ಹೀಗಾಗಿ ನಾಗರಿಕರಲ್ಲಿರುವ ಗೊಂದಲ ಬಗೆಹರಿಸಲು ಮುಂದಾಗಿರುವ ಬೆಸ್ಕಾಂ, ಪ್ರಶ್ನೋತ್ತರದ ರೂಪದಲ್ಲಿ ವಿಸ್ತೃತ ಮಾಹಿತಿ ನೀಡಿದೆ. ಬೆಸ್ಕಾಂ ನೀಡಿದ ಟ್ವೀಟ್ ಮೂಲಕ ಗೊಂದಲ ಪರಿಹಾರ ಮಾಡುವ ಪ್ರಯತ್ನ ಮಾಡಿದೆ.

ಯೋಜನೆ ಕುರಿತು ಎದುರಾಗುವ ಮೊದಲ ಪ್ರಶ್ನೆ ನಾನೂ ಕೂಡ ಯೋಜನೆಗೆ ಅರ್ಹನೆ ಎಂಬುದು ಈ ಬಗ್ಗೆ ಟ್ವೀಟ್‌ನಲ್ಲಿ ವಿವರಿಸಿರುವ ಬೆಸ್ಕಾಂ ಕರ್ನಾಟಕ ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರು ಈ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ.

ಗೃಹ ಜ್ಯೋತಿ ಯೋಜನೆ ಎಂದರೇನು ಎಂಬ ಪ್ರಶ್ನೆಗೂ ಬೆಸ್ಕಾಂ ಉತ್ತರ ಒದಗಿಸಿದ್ದು, ಗೃಹ ಜ್ಯೋತಿ ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ಇದು ಕರ್ನಾಟಕದ ಪ್ರತಿ ಗೃಹ ಬಳಕೆದಾರರಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ ಅನ್ನು ಒದಗಿಸುತ್ತದೆ ಎಂದು ತಿಳಿಸಿದೆ.
ಯೋಜನೆಯನ್ನು ಪಡೆಯಲು ಏನು ಮಾಡಬೇಕು ಎಂಬ ಪ್ರಶ್ನೆಗೆ ಯೋಜನೆಯನ್ನು ಪಡೆಯಲು ಸೇವಾ ಸಿಂಧು ವೆಬ್‌ಸೈಟ್​​ನಲ್ಲಿ ನೋಂದಾಯಿಸಿಕೊಳ್ಳಬೇಕು.

ನೋಂದಣಿಯು ಜೂನ್‌ 18 ರಿಂದ ಪ್ರಾರಂಭವಾಗಿದೆ ಎಂದು ವಿವರಣೆಯನ್ನು ಒದಗಿಸಿದೆ. ಅಲ್ಲದೆ ಯೋಜನೆ ಜಾರಿ ಕುರಿತು ವಿವರಗಳನ್ನು ಒದಗಿಸಿದ್ದು, 2023 ರ ಜುಲೈಯಲ್ಲಿ ಬಳಸಿದ ವಿದ್ಯುತ್‌ಗೆ ಆಗಸ್ಟ್‌ 1, 2023 ರಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಬೆಸ್ಕಾಂ ಹೇಳಿದೆ.

Ashika S

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

19 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

39 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

39 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

41 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

54 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

1 hour ago