ಹೇಗಿದೆ ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ? ದಾಖಲೆಗಳು, ಏನಿದು ಹೊಸ ಷರತ್ತು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಫ್ರೀ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು, ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದ್ದು, ‘ಗೃಹಲಕ್ಷ್ಮೀ’ ಅರ್ಜಿ ನಮೂನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರವಿರುವುದು ಕಂಡುಬಂದಿದೆ.

ಇನ್ನು ಅರ್ಜಿಯಲ್ಲಿ ಮನೆಯ ಯಜಮಾನಿ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.

ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.

ಅದರೊಂದಿಗೆ ಜಾತಿ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಸ್ಥಳವನ್ನು ನೀಡಲಾಗಿದೆ.
ಈ ಅರ್ಜಿಯನ್ನು ತುಂಬಿ ಜೊತೆಗೆ, ಮನೆ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಪ್ರತಿಯನ್ನು ಲಗತ್ತಿಸಬೇಕು. ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನೂ ಲಗತ್ತಿಸಬೇಕು.

ಕೊನೆಗೆ ಸ್ವಯಂ ಘೋಷಣೆ ಒಂದಕ್ಕೆ ಸಹಿ ಹಾಕಬೇಕಾಗಿದ್ದು, ಅದರಲ್ಲಿ ಮನೆಯೊಡತಿ, ನಾನು ಮತ್ತು ನನ್ನ ಪತಿಯು ಅದಾಯ ತೆರಿಗೆ/ ಜಿಎಸ್‌ಟಿ ಪಾವತಿದಾರರಾಗಿರುವುದಿಲ್ಲ. ನಾನು ಒದಗಿಸಿರುವ ಎಲ್ಲಾ ವಿವರಗಳು ನನ್ನ ತಿಳುವಳಿಕೆಯಂತೆ ಸಮರ್ಪಕವಾಗಿದೆ. ನನ್ನ ಕುಟುಂಬ ಮನೆಯಲ್ಲಿ ನಾನೇ ಮನೆ ಒಡತಿಯಾಗಿರುತ್ತೇನೆ. ನಾನು ಒದಗಿಸಿರುವ ಮಾಹಿತಿಯು ಯಾವುದೇ ಕಾಲದಲ್ಲಿ, ಸುಳ್ಳೆಂದು ಕಂಡು ಬಂದರೆ ಕಾನೂನಿನ ಕ್ರಮಕ್ಕೆ ಒಳಗಾಗಲು ಹಾಗೂ ನಾನು ಪಡೆದ ಗೃಹಲಕ್ಷ್ಮೀ ಯೋಜನೆ ಸೌಲಭ್ಯವನ್ನು ಸರ್ಕಾರಕ್ಕೆ ಮರುಪಾವತಿಸಲು ಬದ್ಧಳಾಗಿರುತ್ತೇನೆಂದು ಈ ಮೂಲಕ ದೃಢೀಕರಿಸುತ್ತೇವೆ.” ಎಂಬ ಹೇಳಿಕೆಯನ್ನು ಒಪ್ಪಿ ಸಹಿ ಹಾಕಬೇಕಾಗಿರುತ್ತದೆ.

ಇದೇ ಮಾಹಿತಿಯನ್ನು ಆನ್ಲೈನ್ ಮೂಲಕ ಸಲ್ಲಿಸಿಯೂ ಯೋಜನೆಯ ಫಲಾನುಭವಿಗಳಾಗಬಹುದು. ಅದಕ್ಕೆ ಸಂಬಂಧಿಸಿದ ಅಧಿಕೃತ ವೆಬ್ಸೈಟ್ ಜೂ.15ರಂದು ಕಾರ್ಯಾರಂಭವಾಗಬೇಕಿದೆ.

Ashika S

Recent Posts

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

3 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

3 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

4 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

4 hours ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

5 hours ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

5 hours ago