ಬೆಂಗಳೂರು: ಅಕ್ಟೋಬರ್ 11 ರವರೆಗೆ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದ ಐಎಂಡಿ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರದಿಂದ ಅಕ್ಟೋಬರ್ 11 ರವರೆಗೆ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಏತನ್ಮಧ್ಯೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾರಾಂತ್ಯದಲ್ಲಿ ಮೋಡ ಕವಿದ ವಾತಾವರಣವಿತ್ತು.

ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆಗಳು ಹೇಳುತ್ತವೆ. ಎಲ್ಲಾ ಪ್ರದೇಶಗಳಲ್ಲಿ ಭಾರಿ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಅಕ್ಟೋಬರ್ 11 ರಂದು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಜನರಿಗೆ ತಿಳಿಸಲಾಗಿದೆ.

Ashika S

Recent Posts

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

2 mins ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

18 mins ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

30 mins ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

43 mins ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

49 mins ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

1 hour ago