ಬೆಂಗಳೂರು

ಬೆಂಗಳೂರು: ಚುನಾವಣೆಗೆ ಸ್ಪರ್ಧಿಸಲು ಬೇರೆ ಬೇರೆ ಕ್ಷೇತ್ರಗಳಿಂದ ಆಹ್ವಾನ ಬರುತ್ತಿದೆ

ಬೆಂಗಳೂರು: ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ  ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನನಗೆ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರವೇ ಇಲ್ಲದೆ ಹೋದರೆ ನನ್ನನ್ನು ಬೇರೆ ಕಡೆಗಳಲ್ಲಿಂದ ಬಂದು ಇಲ್ಲಿಂದಲೇ ಸ್ಪರ್ಧೆ ಮಾಡಿ ಎಂದು ಕರೆಯುತ್ತಾರ? ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಬಾದಾಮಿಯಿಂದ ಸ್ಪರ್ಧೆ ಮಾಡುವಂತೆ ಒತ್ತಾಯಿಸಿ ಸಾವಿರಾರು ಜನ ಮಹಿಳೆಯರು ಬಂದು ನಮ್ಮ ಮುಂದೆ ಕುಳಿತುಕೊಳ್ಳುತ್ತೇವೆ ಎಂದು ಪತ್ರ ಬರೆದಿದ್ದಾರೆ. ಆದರೆ ನನ್ನ ಯೋಚನೆ ಏನೆಂದರೆ ಪ್ರತಿ ವಾರಕ್ಕೊಮ್ಮೆ ಬಾದಾಮಿ ಕ್ಷೇತ್ರಕ್ಕೆ ಭೇಟಿನೀಡಿ, ಕಾರ್ಯಕರ್ತರನ್ನು ಬೇಟಿಯಾಗಿ, ಜನರ ಸಮಸ್ಯೆಗಳಿಗೆ ತತ್‌ ಕ್ಷಣದಲ್ಲಿ ಸ್ಪಂದನೆ ನೀಡಲು ಸಾಧ್ಯವಾಗುವುದಿಲ್ಲ.

ಜನ ನೀವು ನಿರಂತರ ಭೇಟಿ ನೀಡದಿದ್ದರೂ ಪರವಾಗಿಲ್ಲ ಇಲ್ಲಿಂದಲೇ ಸ್ಪರ್ಧೆಮಾಡಿ ಎಂದು ಹೇಳಬಹುದು ಆದರೆ ನನ್ನ ಮನಸು ಇದಕ್ಕೆ ಒಪ್ಪುತ್ತಿಲ್ಲ. ನಾನು ಬಾದಾಮಿಗೆ ಹೋಗದೆ ಎರಡು ತಿಂಗಳು ಕಳೆದಿದೆ, ನಾಳೆ ಭೇಟಿ ನೀಡಬೇಕು ಎಂದುಕೊಂಡಿದ್ದೆ ಬೇರೆ ಯಾವುದೋ ತುರ್ತು ಕೆಲಸ ಬಂದಿರುವುದರಿಂದ ನಾಳೆಯೂ ಹೋಗಲು ಆಗಲ್ಲ. ಕೋಲಾರದಿಂದ ಸ್ಪರ್ಧೆ ಮಾಡಿ ಎಂದು ಕರೆಯುತ್ತಿದ್ದಾರೆ, ವರುಣಾದಿಂದ ಸ್ಪರ್ಧೆಮಾಡಿ ಎಂದು ನನ್ನ ಪುತ್ರ ಯತೀಂದ್ರ ಹೇಳುತ್ತಿದ್ದಾರೆ, ಚಾಮರಾಜಪೇಟೆಯಿಂದ ಸ್ಪರ್ಧೆ ಮಾಡುವಂತೆ ಜಮೀರ್‌ ಅಹ್ಮದ್‌ ಕರೆಯುತ್ತಿದ್ದಾರೆ, ಹೀಗೆ ಬೇರೆ ಬೇರೆ ಕಡೆಗಳಿಂದ ಸ್ಪರ್ಧೆಗೆ ಆಹ್ವಾನ ಬರುತ್ತಿದೆ. ಎಲ್ಲಿಂದ ನಿಲ್ಲಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ.

ಅಮಿತ್‌ ಶಾ ಅವರು ಕೊಲೆ ಆರೋಪಿ ಆಗಿರಲಿಲ್ವಾ? ಗಡಿಪಾರಾಗಿದ್ದ ಅವರು ದೇಶದ ಗೃಹ ಸಚಿವರಾಗಿದ್ದಾರೆ, ಕೊಲೆ ಆರೋಪ ಇರುವವರು ಬೇಕಾದಷ್ಟು ಜನ ಶಾಸಕರಾಗಿದ್ದಾರೆ, ಸಂಸದರಾಗಿದ್ದಾರೆ. ಎಲ್ಲಿಯವರೆಗು ಅವರು ಅಪರಾಧಿ ಎಂದು ಸಾಬೀತಾಗುವುದಿಲ್ಲವೋ ಅಲ್ಲಿಯವರೆಗೆ ಅವರು ಅಮಾಯಕರು. ಅಪರಾಧಿ ಸ್ಥಾನದಲ್ಲಿ ಇರುವವರು ತಪ್ಪಿತಸ್ಥರಲ್ಲ ಎಂದು ಕ್ರಿಮಿನಲ್‌ ಕಾನೂನು ಹೇಳುತ್ತದೆ.

ಸಿಎಂ ಇಬ್ರಾಹಿಂ ನನ್ನ ಒಳ್ಳೆಯ ಗೆಳೆಯ ಆದರೆ ಅವರು ನಮ್ಮನ್ನು ಬಿಟ್ಟು ಜೆಡಿಎಸ್‌ ಗೆ ಹೊರಟು ಹೋಗಿ ಅಧ್ಯಕ್ಷರಾಗಿದ್ದಾರೆ. ಅವರು ಭದ್ರಾವತಿಯಿಂದ ಬೇಕಾದರೆ ಸ್ಪರ್ಧೆ ಮಾಡಬಹುದು, ಅಲ್ಲಿ ಅಪ್ಪಾಜಿ ಗೌಡ ಅವರು ತೀರಿಹೋಗಿದ್ದಾರೆ. ನಾನು ಎಲ್ಲಿಂದ ಚುನಾವಣೆಗೆ ನಿಲ್ಲಬೇಕು ಎಂದು ನಮ್ಮ ಪಕ್ಷ ತೀರ್ಮಾನ ಮಾಡುತ್ತದೆ, ಜೆಡಿಎಸ್‌ ಪಕ್ಷ ಅಲ್ಲ. ಆತ್ಮೀಯನಾಗಿ ಬೇಕಾದರೆ ವೈಯಕ್ತಿಕವಾಗಿ ಭೇಟಿ ಮಾಡಿ ಸಲಹೆ ನೀಡಲಿ. ಹಾಲಿ ಶಾಸಕರ ಟಿಕೇಟ್‌ ತಪ್ಪಿಸಿ ಇಬ್ರಾಹಿಂ ಅವರಿಗೆ ಭದ್ರಾವತಿಯಲ್ಲಿ ಟಿಕೇಟ್‌ ನೀಡಿದ್ದೆವು. ಆದರೆ ಭದ್ರಾವತಿಯಲ್ಲಿ ಡೆಪಾಸಿಟ್‌ ಕಳೆದುಕೊಂಡಿದ್ದರು ಅಂದರೆ ಅವರ ಲೆಕ್ಕಾಚಾರ ಸರಿಯಿಲ್ಲ ಎಂದರ್ಥವಲ್ವಾ? ನಾನು ಒಬ್ಬಂಟಿಗನಾಗಿದ್ದರೆ ನನ್ನ ಜೊತೆ ಇಷ್ಟೊಂದು ಜನ ಶಾಸಕರು, ಪಕ್ಷದ ಹಿರಿಯ ನಾಯಕರು, ಎಲ್ಲಾ ಜಾತಿ ಧರ್ಮಗಳ ನಾಯಕರು ಇದ್ದಾರೆ, ಒಬ್ಬಂಟಿಯಾಗಿದ್ದರೆ ಇವರೆಲ್ಲ ನನ್ನ ಜೊತೆ ಇಲ್ಲಿ ಇರುತ್ತಿದ್ದರಾ?

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಕಲ್ಪಿಸಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿರುವುದನ್ನು ಸಂವಿಧಾನ ಬದ್ಧ ಎಂದು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ತೀರ್ಪು ನೀಡಿರುವುದು 5 ಜನರ ನ್ಯಾಯಮೂರ್ತಿಗಳ ಪೀಠ, ಇದರಲ್ಲಿ 3 ಜನರ ಅಭಿಪ್ರಾಯ ಒಂದು ರೀತಿ ಇದೆ, ಇನ್ನುಳಿದ ಇಬ್ಬರು ನ್ಯಾಯಮೂರ್ತಿಗಳ ಅಭಿಪ್ರಾಯ ಬೇರೆ ರೀತಿ ಇದೆ. ನಾನು ಸುಪ್ರೀಂ ಕೋರ್ಟ್‌ ನಿರ್ಣಯದ ಬಗ್ಗೆ ಮಾತನಾಡಲ್ಲ, ನನ್ನ ವೈಯಕ್ತಿಕ ಅಭಿಪ್ರಾಯ ಏನೆಂದರೆ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬಹುದು ಎಂದು ಸಂವಿಧಾನದ 15 ಮತ್ತು 16ನೇ ವಿಧಿ ಹೇಳುವುದಿಲ್ಲ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕು ಎಂದು ಹೇಳಿದೆ. ಈಗ ಕೋರ್ಟ್‌ ತೀರ್ಪು ಬಂದಿದೆ, ಈ ತೀರ್ಪಿನ ಪೂರ್ಣ ಪ್ರತಿ ಸಿಕ್ಕಮೇಲೆ ಮುಂದೆ ನೋಡೋಣ.

ನರೇಂದ್ರ ಮೋದಿ ಅವರು ರಾಜ್ಯ ಮತ್ತು ಕೇಂದ್ರದಲ್ಲಿ ಡಬ್ಬಲ್‌ ಇಂಜಿನ್‌ ಸರ್ಕಾರ ಇದೆ ಎಂದು ಹೇಳಿದ್ದರು, ಆದರೆ ಅವರು ನಮ್ಮ ರಾಜ್ಯಕ್ಕೆ ಏನು ಮಾಡಿದ್ದಾರೆ? ಪ್ರವಾಹ ಬಂದಾಗ ಇಲ್ಲಿಗೆ ಬಂದು ಜನರ ಕಷ್ಟ ಕೇಳಲಿಲ್ಲ, ಚುನಾವಣೆ ಹತ್ತಿರ ಬಂದಿರುವುದರಿಂದ ರಾಜ್ಯಕ್ಕೆ ಬರುತ್ತಿದ್ದಾರೆ. ಬೇಲೆಯೇರಿಕೆ, ನಿರುದ್ಯೋಗ, ರೈತರ ಆದಾಯ ದುಪ್ಪಟ್ಟು ಮಾಡಲು ಏನು ಕ್ರಮ ಕೈಗೊಂಡಿದ್ದಾರೆ? ಇವರು ಅಧಿಕಾರಕ್ಕೆ ಬಂದ ಮೇಲೆ ದ್ವೇಷ ರಾಜಕಾರಣ ಹೆಚ್ಚಾಗಿದೆ, 40% ಕಮಿಷನ್‌ ಭ್ರಷ್ಟಾಚಾರದ ಆರೋಪ ಹೊತ್ತಿರುವ ರಾಜ್ಯ ಸರ್ಕಾರದ ಮೇಲೆ ಯಾವ ಕ್ರಮ ಕೈಗೊಂಡಿದ್ದಾರ? ರಾಜ್ಯ ಬಿಜೆಪಿ ಚುನಾವಣೆಗೆ ಮೊದಲು ನೀಡಿದ್ದ ಭರವಸೆಗಳಲ್ಲಿ 10% ಅನ್ನು ಕೂಡ ಈಡೇರಿಸಿಲ್ಲ. ಬರೀ ನ ಖಾವೂಂಗ, ನಾ ಖಾನೇದೂಂಗ ಅಂದರೆ ಸಾಕ?

ಜನಾರ್ದನ ರೆಡ್ಡಿಯವರು ಕಾಂಗ್ರೆಸ್‌ ಸೇರುವ ಬಗ್ಗೆ ನಮ್ಮ ಜೊತೆ ಮಾತನಾಡಿಲ್ಲ. ಈ ಬಗ್ಗೆ ಮಾತುಕತೆ ನಡೆಸದೆ ಸುಮ್ಮನೆ ಏನೋ ಉತ್ತರ ಕೊಡೋಕೆ ಬರಲ್ಲ.

ಡಿ.ಕೆ ಶಿವಕುಮಾರ್‌ ಮತ್ತು ತಾವು ಜೊತೆಗೆ ಓಡಾಡಿದರೂ ತಮ್ಮ ನಡುವಿನ ಸಂಬಂಧ ಸರಿಯಿಲ್ಲ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ನಡುವಿನ ಸಂಬಂಧ ಹಳಸೋಗಿದೆ. ಆದರೆ ನನ್ನ ಮತ್ತು ಶಿವಕುಮಾರ್‌ ಅವರ ನಡುವಿನ ಸಂಬಂಧ ಚೆನ್ನಾಗಿಯೇ ಇದೆ.

Ashika S

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

2 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

5 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

22 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

27 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

35 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

52 mins ago