News Karnataka Kannada
Sunday, May 19 2024
ಬೆಂಗಳೂರು

ವಿಶ್ವದ 2ನೇ ಅತ್ಯಂತ ಜನದಟ್ಟಣೆ ನಗರ ಬೆಂಗಳೂರು

Photo Credit : News Kannada

ಬೆಂಗಳೂರು : ಬೆಂಗಳೂರು ವಿಶ್ವದ 2ನೇ ಅತ್ಯಂತ ಜನದಟ್ಟಣೆ ನಗರವಾಗಿದೆ ಎಂದು ಅಂಕಿ ಅಂಶಗಳು ತಿಳಿಸಿದೆ.

ದೆಹಲಿ ಅಂಕಿಅಂಶಗಳ ಕೈಪಿಡಿ 2023ಯಲ್ಲಿ ಈ ಮಾಹಿತಿ ನೀಡಿದೆ. ಬೆಂಗಳೂರು ತನ್ನ ಟ್ರಾಫಿಕ್ ಕಾರಣಕ್ಕಾಗಿ ಜಗತ್ತಿನಲ್ಲಿಯೇ ಕುಖ್ಯಾತಿ ಪಡೆದುಕೊಂಡಿದೆ. ಬೆಂಗಳೂರು 2022 ರಲ್ಲಿ ಜಾಗತಿಕವಾಗಿ ಎರಡನೇ ಅತಿ ಹೆಚ್ಚು ದಟ್ಟಣೆಯ ನಗರ ಎನ್ನುವ ಕುಖ್ಯಾತಿಯನ್ನೂ ಪಡೆದಿದೆ. ಲಂಡನ್ ನಂತರದ ಸ್ಥಾನದಲ್ಲಿ ಬೆಂಗಳೂರು ನಗರವಿದೆ. 2022ರಲ್ಲಿ ಬೆಂಗಳೂರಿಗರು ತಮ್ಮ ಜೀವನದ ಹೆಚ್ಚಿನ ಸಮಯವನ್ನು ಟ್ರಾಫಿಕ್ ನಲ್ಲಿಯೇ ಕಳೆದಿದ್ದಾರೆ ಎಂದು ಹೇಳಲಾಗಿದೆ. ಪ್ರಯಾಣಿಕರು 10 ಕಿಮೀ ಕ್ರಮಿಸಲು ಸರಾಸರಿ 29 ನಿಮಿಷಗಳು ಮತ್ತು 10 ಸೆಕೆಂಡುಗಳನ್ನು ತೆಗೆದುಕೊಂಡಿದ್ದಾರೆ.

ಮೊದಲ ಸ್ಥಾನದಲ್ಲಿ ಲಂಡನ್, ಎರಡನೇ ಸ್ಥಾನದಲ್ಲಿ ಬೆಂಗಳೂರು. ಐರ್ಲೆಂಡ್ ಡಬ್ಲಿನ್ ಮೂರನೇ ಅತಿ ಹೆಚ್ಚು ದಟ್ಟಣೆಯಿಂದ ಕೂಡಿದ ನಗರವಾಗಿದೆ. ನಂತರ ಜಪಾನ್ನ ಸಪೊರೊ, ಇಟಲಿಯ ಮಿಲನ್ ಮತ್ತು ಭಾರತದಲ್ಲಿ ಪುಣೆ (ಆರನೇ) ಸ್ಥಾನದಲ್ಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು