ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಪ್ರಭಾವಿ ನಾಯಕ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.
ಭಾನುವಾರ ರಾತ್ರಿ ರಿಚ್ಮಂಡ್ ಟೌನ್ನಲ್ಲಿರುವ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಫ್ಲ್ಯಾಟ್ನಲ್ಲಿ ಹಿರಿಯ ಮುಖಂಡರೊಂದಿಗೆ ಜಗದೀಶ್ ಶೆಟ್ಟರ್ ಸಭೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಧಿಕೃತವಾಗಿ ಸೇರ್ಪಡೆಯಾಗುವ ಸಾಧ್ಯತೆ ಇದೆ.