News Karnataka Kannada
Saturday, May 04 2024
ಬೆಂಗಳೂರು

ಬೆಂಗಳೂರು: ಪತ್ರಕರ್ತರಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Jawahar Navodaya Vidyalaya invites applications for admission to class 6
Photo Credit : Pixabay

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ/ ಲೇಖನ/ ಸುದ್ದಿ ಹಾಗೂ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ್ ತಿಳಿಸಿದ್ದಾರೆ.

ಪತ್ರಿಕಾ ವಿಭಾಗ

ಜಿ.ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ) ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ) ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ) ಬಿ.ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿಗೆ) ಕೆ. ಎ.ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿಗೆ), ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ವಿಮರ್ಶಾತ್ಮಕ ಲೇಖನಕ್ಕೆ) ಮಂಗಳ ಎಂ. ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆಯಲ್ಲಿ ಪ್ರಕಟವಾದ ಚಿತ್ರ ಲೇಖನಕ್ಕೆ) ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ (ಅತ್ಯುತ್ತಮ ಸುದ್ದಿ ಛಾಯಾಚಿತ್ರಕ್ಕೆ),ಆರ್.ಎಲ್.ವಾಸುದೇವರಾವ್ ಪ್ರಶಸ್ತಿ(ಅರಣ್ಯ ಕುರಿತ ಅತ್ಯುತ್ತಮ ಲೇಖನಕ್ಕೆ) ಆರ್.ಎಲ್. ವಾಸುದೇವರಾವ್ ಪ್ರಶಸ್ತಿ (ವನ್ಯ ಪ್ರಾಣಿಗಳ ಕುರಿತ ಅತ್ಯುತ್ತಮ ಲೇಖನಕ್ಕೆ) ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ(ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿಗೆ) ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನ-ಜೀವನದ ಅತ್ಯುತ್ತಮ ವರದಿಗೆ), ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ (ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆ ಅಭಿವೃದ್ಧಿ ಕುರಿತ ಅತ್ಯುತ್ತಮ ವರದಿಗೆ) ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ (ಜಿಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಅತ್ಯುತ್ತಮ ಕೃಷಿ ವರದಿ) ಹಾಸ್ಯ ಚಕ್ರವರ್ತಿ ನಾಡಿಗ ಕೃಷ್ಣರಾಯರ ಪ್ರಶಸ್ತಿ (ಅತ್ಯುತ್ತಮ ವಿಡಂಬನಾತ್ಮಕ ಲೇಖನಕ್ಕೆ) ಅತ್ಯುತ್ತಮ ಪುಟ ವಿನ್ಯಾಸಗಾರರಿಗೆ (ಡೆಸ್ಕ್ ನಲ್ಲಿ ಕೆಲಸ ಮಾಡುವವರು) ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿಗಾಗಿ, ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ (ಅತ್ಯುತ್ತಮ ಸೇನಾ ವರದಿ ಪ್ರಶಸ್ತಿ) ನೀಡಲಾಗುತ್ತದೆ.

ವಿದ್ಯುನ್ಮಾನ (ಟಿವಿ)ವಿಭಾಗ

ಅತ್ಯುತ್ತಮ ರಾಜಕೀಯ ವಿಶ್ಲೇಷಣೆ, ಅತ್ಯುತ್ತಮ ತನಿಖಾ ವರದಿಗಾಗಿ, ಅತ್ಯುತ್ತಮ ಸಾಮಾಜಿಕ ಕಳಕಳಿ ಕುರಿತ ಮಾನವೀಯ ವರದಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು, ಪ್ರಶಸ್ತಿಗೆ 2020 ಜನವರಿ 1 ರಿಂದ 2020 ಡಿಸೆಂಬರ್ 31 ರೊಳಗೆ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ/ವರದಿ/ವಿಶೇಷ ವರದಿ ಸುದ್ದಿ ಛಾಯಾ ಚಿತ್ರಗಳನ್ನು ಕಳುಹಿಸಬೇಕು.

ವರದಿ/ಲೇಖನ ಯಾವ ಪ್ರಶಸ್ತಿಗೆ ಎಂಬುದನ್ನು ಲೇಖನದ ಮುಖಪುಟದಲ್ಲಿ ಸ್ವಷ್ಟವಾಗಿ ಬರೆದಿರಬೇಕು, ಅನುವಾದ ಮಾಡಿದ ವರದಿ/ಲೇಖನಗಳಿಗೆ ಅವಕಾಶವಿಲ್ಲ. ರಾಜ್ಯ ಸಂಘದ ಪದಾಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಪದಾಕಾರಿಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ, ಲೇಖನ ವರದಿಗಳನ್ನು ಮೂರು ಪ್ರತಿಗಳಲ್ಲಿ (ಜೆರಾಕ್ಸ್ ಪ್ರತಿಗಳಾದರೆ ದೃಢೀಕೃತವಾದ ಒಂದು ಮೂಲ ಪ್ರತಿ ಇರಬೇಕು.) ಕಳುಹಿಸಬೇಕು. ವಿದ್ಯುನ್ಮಾನ ಮಾಧ್ಯಮದ ಪ್ರಶಸ್ತಿಗಳ ಪ್ರವೇಶಕ್ಕೆ ವರದಿ ಪ್ರಸಾರವಾದ ಕ್ಲಿಪಿಂಗ್ (ಸಿಡಿ ಅಥವಾ ಪೆನ್‍ಡ್ರೈವ್) ಮತ್ತು ಅದರ ಸ್ಕ್ರಿಪ್‍ಗಳನ್ನು ಸಂಪಾದಕರ ದೃಢೀಕರಣ ಸಹಿತ ಕಳುಹಿಸಬೇಕು. ಅರ್ಜಿ ಸಲ್ಲಿಸುವವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವದ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು.

ಲೇಖನದ ಜೊತೆಯಲ್ಲಿ ಸ್ವ ಪರಿಚಯ ಮತ್ತು ಪಾಸ್ ಪೋರ್ಟ್ ಸೈಜ್ ಭಾವಚಿತ್ರ ಕಳುಹಿಸಬೇಕು, ಈಗಾಗಲೇ ಒಂದು ಬಾರಿ ಪ್ರಶಸ್ತಿಯನ್ನು ಪಡೆದವರು, ಮತ್ತೆ ಅದೇ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅರ್ಜಿಗಳನ್ನು ಕಳುಹಿಸಿಕೊಡಬೇಕಾದ ವಿಳಾಸ: ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ) ಕಂದಾಯ ಭವನ, 3ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560009 ಈ ವಿಳಾಸಕ್ಕೆ ನವೆಂಬರ್ 28ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಬಂದವುಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ : 080-22212192 ಸಂಪರ್ಕಿಸಲು ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು