News Karnataka Kannada
Friday, May 03 2024
ಬೆಂಗಳೂರು

ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್

ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಕರಗ ಉತ್ಸವ ನಡೆಯಲಿದೆ.
Photo Credit : News Kannada

ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು,  ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಕರಗ ಉತ್ಸವ ನಡೆಯಲಿದೆ.

ನಿನ್ನೆ (ಫೆ.18) ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ರು, ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.

ಕರಗವು ದ್ರೌಪದಿಯನ್ನು ಸರ್ವೋತ್ಕೃಷ್ಟ ಮಹಿಳೆ ಎಂದು ಚಿತ್ರಿಸುತ್ತದೆ ಮತ್ತು ಅವಳನ್ನು ಶಕ್ತಿ ದೇವತೆ ಎಂದು ಗೌರವಿಸುತ್ತದೆ.

ಕರಗವನ್ನು ಹೊರುವವರು ಮಹಿಳೆಯಂತೆ ಅಲಂಕಾರ ಮಾಡಿಕೊಳ್ಳಬೇಕು. ಕಂಕಣ, ಮಂಗಳ-ಸೂತ್ರ, ಹಣೆಯ ಮೇಲೆ ಸಿಂಧೂರ ಇಟ್ಟುಕೊಂಡು ಮುತೈದೆಯಂತೆ ಕಾಣಬೇಕು. ಈ ರೀತಿ ಅಲಂಕಾರ ಮಾಡಿಕೊಂಡೇ ಕರಗವನ್ನು ಹೊರಬೇಕು. ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲೂ ಕರಗ ಉತ್ಸವದ ಉಲ್ಲೇಖವನ್ನು ಗಮನಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು