ಬೆಂಗಳೂರು: ಕಾಶಿ ದರ್ಶನ್ , ವಂದೇ ಮಾತರಂಗೆ ಚಾಲನೆ

ಬೆಂಗಳೂರು:  ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ  ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ  ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು.

ಎಂಟು ದಿನಗಳ ಕಾಶಿ ದರ್ಶನದ ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ ಯಾತ್ರಿಕರನ್ನು ಕರೆದೊಯ್ಯುತ್ತದೆ. ಮುಜರಾಯಿ ಇಲಾಖೆ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ. ಈ ಯಾತ್ರೆಗೆ ಒಟ್ಟು ವೆಚ್ಚ 20,000 ರೂ ಇದ್ದು, ಇದರಲ್ಲಿ ಸರ್ಕಾರ 5000ರೂ ಸಹಾಯಧನ ನೀಡುತ್ತಿದೆ. ಪ್ರವಾಸದಲ್ಲಿ ಆಹಾರ,ವಸತಿ ಹಾಗೂ ಇನ್ನಿತರ ಸೌಕರ್ಯಗಳನ್ನು ಯಾತ್ರಿಕರಿಗೆ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಕಾನೂನು ಮತ್ತು ಸಂಸದೀಯ, ಗಣಿ ಮತ್ತು ಕಲ್ಲಿದ್ದಿಲು ಸಚಿವ ಪ್ರಹ್ಲಾದ್ ಜೋಷಿ,  ರಾಜ್ಯದ ಮುಜರಾಯಿ, ಹಜ್  ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಹಾಗೂ ಇತರ ಗಣ್ಯರು ಹಾಜರಿದ್ದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

6 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

6 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

7 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago