ಮಿಲ್ಮಾ ವರ್ಸಸ್‌ ಕೆಎಂಎಫ್‌: ಕೇರಳದಲ್ಲಿ ಕೆಎಂಎಫ್‌ ಹಾಲು ಮಳಿಗೆ ವಿಸ್ತರಣೆಗೆ ತಡೆ

ಬೆಂಗಳೂರು: ತಮ್ಮ ರಾಜ್ಯದಲ್ಲಿ ನಂದಿನಿ ಹಾಲಿನ ಡೈರಿಗಳನ್ನು ವಿಸ್ತರಣೆ ಮಾಡದಂತೆ, ಕೆಎಂಎಫ್‌ ನೊಂದಿಗೆ ಕೇರಳ ಸರಕಾರದ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಕೇರಳದ ಪಶುಸಂಗೋಪನೆ, ಡೈರಿ ಅಭಿವೃದ್ಧಿ ಮತ್ತು ಹಾಲು ಸಹಕಾರಿಗಳ ಸಚಿವ ಜೆ ಚಿಂಚುರಾಣಿ ಅವರು ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ಸಿಇಒ ಅವರಿಂದ ಕೇರಳದ ಹಾಲಿನ ಡೈರಿಗಳಲ್ಲಿ ನಂದಿನಿ ಬ್ರಾಂಡ್​​ನ ಹಾಲುಗಳನ್ನು ಮಾರಾಟದ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ಸದ್ಯಕ್ಕೆ ನಂದಿನಿ ಹೊಸ ಮಳಿಗೆಗಳನ್ನು ತೆರೆಯುವುದಿಲ್ಲ ಎಂಬ ಮಾಹಿತಿಯನ್ನು ಕೆಎಂಎಫ್‌ನ ಸಿಇಒ ಹೇಳಿದ್ದಾರೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಕೆಎಂಎಫ್ ನಿರ್ಧಾರವನ್ನು ಸಚಿವರಾದ ಚಿಂಚುರಾಣಿ ಸ್ವಾಗತಿಸಿದ್ದು, ಕರ್ನಾಟಕದಲ್ಲಿ ಸರ್ಕಾರ ಬದಲಾವಣೆಯಾದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದ್ದಾರೆ.

Ashika S

Recent Posts

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

3 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

22 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

23 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

38 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

41 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago