ಬೆಂಗಳೂರು

ಬೆಂಗಳೂರು: ಕರಗ ಉತ್ಸವ ಕುರಿತು ಟೀಕೆ- ದೇವಳದಲ್ಲಿ ಕ್ಷಮೆಯಾಚಿಸಿದ ಶಾಸಕ ಹ್ಯಾರಿಸ್‌

ಬೆಂಗಳೂರು: ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಲಪಾಡ್ ಅಹಮದ್ ಹ್ಯಾರಿಸ್ ಶುಕ್ರವಾರ ಹಿಂದೂ ಭಕ್ತರ ಕ್ಷಮೆಯಾಚಿಸಿದರು.

ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವವನ್ನು ಹ್ಯಾರಿಸ್‌ ನಾಟಕ ಎಂದು ಕರೆದಿದ್ದರು. ಹ್ಯಾರಿಸ್‌ ಅವರ ಭಾಷಣ ವೈರಲ್ ಆಗಿದ್ದು, ಟೀಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಶಾಸಕರು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ್ದರು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲಿಂಗ್ ಮತ್ತು ಟೀಕೆಗಳು ಮುಂದುವರಿದ ಕಾರಣ ದೇವಳಕ್ಕೆ ತೆರಳಿ ಕ್ಷಮೆಯಾಚಿಸಿದ್ದಾರೆ.

“ನನಗೆ ದೇವರ ಮೇಲೆ ಅಪಾರ ಗೌರವವಿದೆ. ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕ್ಷಮೆ ಕೇಳಿದ್ದೇನೆ. ಬೆಂಗಳೂರಿನಲ್ಲಿ ಪ್ರತಿ ವರ್ಷ ನಡೆಯುವ ಕರಗ ಉತ್ಸವದಲ್ಲಿ ನಾನು ಸಹ ಭಾಗವಹಿಸುತ್ತೇನೆ” ಎಂದು ಹ್ಯಾರಿಸ್ ಹೇಳಿದರು.

ಕರಗ ಸಮಿತಿ ಅಧ್ಯಕ್ಷ ಸತೀಶ್ ಮಾತನಾಡಿ, ಶಾಸಕ ಹ್ಯಾರಿಸ್ ಈಗಾಗಲೇ ಕ್ಷಮೆಯಾಚಿಸಿದ್ದಾರೆ. ಅವರು ದೇವಸ್ಥಾನಕ್ಕೆ ಬಂದು ಕ್ಷಮೆಯಾಚಿಸಿದ್ದಾರೆ. ಮುಂದೆ ಎಲ್ಲ ಸಮುದಾಯದವರು ಈ ಬಗ್ಗೆ ಮಾತನಾಡದಂತೆ ವಿನಂತಿಸುತ್ತೇನೆ. ಕರಗ ಉತ್ಸವ ಬಗ್ಗೆ ಕೀಳಾಗಿ ಮಾತನಾಡಬೇಡಿ ಎಂದು ವಿನಂತಿಸಿದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago