News Karnataka Kannada
Thursday, April 25 2024
ಬೆಂಗಳೂರು ನಗರ

ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿ: ಸಿಎಂ

Photo Credit :

ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿ: ಸಿಎಂ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 10 ತಿಂಗಳ ಅವಧಿಗೆ ಗೌರವ ಧನದ ಆಧಾರದ ಮೇಲೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿದ್ದು, ಕೋವಿಡ್ ಹಿನ್ನೆಲೆಯಲ್ಲಿ 2020 ಏಪ್ರಿಲ್ ತಿಂಗಳಿನಿಂದ ವೇತನ ಪಾವತಿಯಾಗದ ಕಾರಣ, 2020 ಏಪ್ರಿಲ್ ನಿಂದ ಆಗಸ್ಟ್ ವರೆಗೆ ಕರ್ತವ್ಯದ ಮೇಲೆ ಎಂದು ಪರಿಗಣಿಸಿ, ವೇತನ ಪಾವತಿ ಮಾಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್ ಅಧಿವೇಶನದಲ್ಲಿ ಹಾವನೂರು ಮಂಜುನಾಥ್ ಅವರು ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಯಾಗದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಕೂಡಲೇ ಅವರಿಗೆ ವೇತನ ಪಾವತಿ ಮಾಡುವಂತೆ ಪ್ರಶ್ನೋತ್ತರ ವೇಳೆಯಲ್ಲಿ ಮನವಿ ಮಾಡಿದಕ್ಕೆ ಉತ್ತರಿಸುತ್ತಾ ಈ ವಿಷಯ ತಿಳಿಸಿದರು.

ಇನ್ನೊಂದೆಡೆ ತೋಟಗಾರಿಕೆ ಮತ್ತು ಪೌರಾಡಳಿತ ಸಚಿವ ನಾರಾಯಣ ಗೌಡ ಮಾತನಾಡಿ ಮಾರ್ಚ್‍ನಲ್ಲಿ ಕಾಣಿಸಿಕೊಂಡ ಕೊರೋನಾ ಮಹಾಮಾರಿಯಿಂದ ಕಷ್ಟದಲ್ಲಿ ಸಿಲುಕಿರುವ ಹೂವು ಹಾಗೂ ಹಣ್ಣು –ತರಕಾರಿ ಬೆಳೆಗಾರರಿಗೆ 1 ಎಕರೆಗೆ 25 ಸಾವಿರ ರೂ. ಪರಿಹಾರ ನೀಡಲಾಗಿದೆ ಎಂದು ಹೇಳಿದರು.

ಶಾಸಕರಾದ ವಿ.ಆರ್.ರಮೇಶ್ ಅವರು, ಹೂವು ಬೆಳೆಗಾರರಿಗೆ ಹಾಗೂ ಹಣ್ಣು –ತರಕಾರಿ ಬೆಳೆಗಾರರಿಗೆ ಮಾರ್ಚ್‍ನಲ್ಲಿ ಕಾಣಿಸಿಕೊಂಡ ಕೊರೋನಾ ಮಹಾಮಾರಿಯಿಂದ ಅನ್ಯಾಯವಾಗಿದ್ದು, ಇವರಿಗೆ ಒದಗಿಸಿರುವ ಪರಿಹಾರದ ಬಗ್ಗೆ ಪ್ರಶ್ನೆ ಮಾಡಿದಾಗ, ತೋಟಗಾರಿಕೆ ಮತ್ತು ಪೌರಾಡಳಿತ ಸಚಿವರು ಇದಕ್ಕೆ ಉತ್ತರ ನೀಡಿದರು.

ಹಣ್ಣು ತರಕಾರಿ ಬೆಳೆಗಾರರಿಗೆ ಅನುಕೂಲವಾಗುವಂತೆ ತಾಲ್ಲೂಕು ಕೇಂದ್ರಗಳಲ್ಲಿ ಹಾಪ್‍ಕಾಮ್ಸ್ ತೆರೆದು ರೈತರಿಂದ ಖರೀದಿ ಮಾಡಲಾಗಿದೆ. ಜೊತೆಗೆ ಕೇರಳ ಮತ್ತು ಗುಜರಾತ್‍ಗೆ ಕಿಸಾನ್ ರೈಲು ಮೂಲಕ ತಲುಪಿಸಲಾಗಿದೆ ಎಂದರು.

ಪಡಿತರ ವಿತರಣೆಯಲ್ಲಿ ಅಕ್ರಮವೆಸಗಿದ್ದ 7 ನ್ಯಾಯ ಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. 531 ಅಂಗಡಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ. ಸುಮಾರು 100 ಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಅವರ ಪರವಾಗಿ ಉತ್ತರ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು