News Karnataka Kannada
Monday, April 15 2024
Cricket
ಬೆಂಗಳೂರು ನಗರ

ಅರಗ ಜ್ಞಾನೇಂದ್ರ ವಿರುದ್ಧ ನಿಂದನಾತ್ಮಕ ಹೇಳಿಕೆ: ಹರಿಪ್ರಸಾದ್ ವಿರುದ್ಧ ದೂರು ದಾಖಲು

Bk Hariprasad
Photo Credit :

ಬೆಂಗಳೂರು,ಏ.13 : ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ದೂರು ದಾಖಲಿಸಿದೆ.

ಕೆಲ ದಿನಗಳ ಹಿಂದೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಹರಿಪ್ರಸಾದ್ ಅವರು ಗೃಹ ಸಚಿವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹರಿಪ್ರಸಾದ್ ಅವರು ಪ್ರತಿಭಟನೆಯಲ್ಲಿ ಮಾತನಾಡುವಾಗ ಗೃಹಸಚಿವರಿಗೆ ಕುಡಿಯುವ ಚಟ ಇಲ್ಲವೇ ಗಾಂಜಾ ಸೇದುವ ಅಭ್ಯಾಸ ಇರಬೇಕು ಎಂಬ ಹೇಳಿಕೆ ನೀಡಿರುವುದು ಹಾಗೂ ಅಜ್ಞಾನಿ ಜ್ಞಾನೇಂದ್ರ ಎಂದು ಜರಿದಿರುವ ವಿಡಿಯೋ ಹಾಗೂ ಆಡಿಯೋ ತುಣುಕುಗಳನ್ನು ದೂರಿನೊಂದಿಗೆ ಲಗತ್ತಿಸಿದ್ದಾರೆ.

ರಾಜಕೀಯದಲ್ಲಿ ಅತ್ಯಂತ ಪ್ರಾಮಾಣಿಕ ವ್ಯಕ್ತಿ ಎಂದು ಗುರುತಿಸಿಕೊಂಡಿರುವ ಅರಗ ಜ್ಞಾನೇಂದ್ರ ಅವರ ವಿರುದ್ಧ ಹರಿಪ್ರಸಾದ್ ಅವರು ಮಾಡಿರುವ ಅಪಾದನೆಗಳು ಕಾನೂನಿಂತೆ ಅಪರಾಧವಾಗುತ್ತದೆ. ಹೀಗಾಗಿ ಕೂಡಲೆ ಪೊಲೀಸರು ಹರಿಪ್ರಸಾದ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು