News Karnataka Kannada
Saturday, April 13 2024
Cricket
ಬೆಂಗಳೂರು ನಗರ

ಅಲ್ಪ ಸಂಖ್ಯಾತರು ಶಾಂತಿಯುತ ಜೀವನ ನಡೆಸಲು ಬಿಡಬೇಕು; ಬಿಎಸ್ ಯಡಿಯೂರಪ್ಪ

Shimoga: Priyank Kharge has committed an unpardonable crime without an apology, says BS Yediyurappa Yediyurappa
Photo Credit : News Kannada

ಬೆಂಗಳೂರು : ಇತ್ತೀಚೆಗಷ್ಟೇ ಧಾರವಾಡದಲ್ಲಿ ಹಣ್ಣಿನ ಗಾಡಿ ಮಾರಾಟಗಾರರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಇಂತಹ ಕೃತ್ಯಗಳಿಗೆ ಯಾರೂ ಮುಂದಾಗಬಾರದು ಅಲ್ಪ ಸಂಖ್ಯಾತರು ಶಾಂತಿಯುತ ಜೀವನ ನಡೆಸಲು ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಧರ್ಮದ ಜನರು ಶಾಂತಿಯುತವಾಗಿ ಬದುಕಬೇಕು ಮತ್ತು ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಸಿಎಂ ತಿಳಿಸಿರುವುದಾಗಿ ಅವರು ಹೇಳಿದ್ದಾರೆ

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಹೊರತು ಸಣ್ಣಪುಟ್ಟ ವಿಚಾರಗಳಿಗೆ ಗೊಂದಲ ಸೃಷ್ಟಿಸಬಾರದು ಎಂದರು. ಏಪ್ರಿಲ್ 12 ರಿಂದ ಬಿಜೆಪಿಯ ಹಿರಿಯ ನಾಯಕರು ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಮೂರು ತಂಡಗಳು ಚುನಾವಣೆಗೆ ಮುನ್ನ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು