News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಅವ್ಯವಹಾರ ಸಾಬೀತಾದಾದರೆ ತಕ್ಷಣ ರಾಜೀನಾಮೆ: ಶ್ರೀರಾಮುಲು

Photo Credit :

ಅವ್ಯವಹಾರ ಸಾಬೀತಾದಾದರೆ ತಕ್ಷಣ ರಾಜೀನಾಮೆ: ಶ್ರೀರಾಮುಲು

ಬೆಂಗಳೂರು: ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ಆರೋಗ್ಯ ಸಂಬಂಧಿತ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎನ್ನುವ ಪ್ರತಿಪಕ್ಷಗಳ ಆರೋಪ ನಿರಾಧಾರವಾಗಿದ್ದು, ಇಂತಹ ಯಾವುದೇ ಪ್ರಕರಣಗಳು ನಡೆದಿಲ್ಲ. ಒಂದು ವೇಳೆ ಅವ್ಯವಹಾರ ಸಾಬೀತಾದಾದರೆ ತಕ್ಷಣವೇ ರಾಜಿನಾಮೆ ನೀಡಲು ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಪ್ರತಿಪಕ್ಷಗಳ ಆರೋಪ ಕುರಿತು ಸೋಮವಾರ ವಿಕಾಸಸೌಧದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಪಕ್ಷಗಳು ಕಳೆದ ಮಾರ್ಚ್‍ನಲ್ಲಿದ್ದ ರಾಜ್ಯದ ಪರಿಸ್ಥಿತಿಯನ್ನು ಅರಿತುಕೊಂಡು ಆರೋಪ ಮಾಡಬೇಕು, 2020 ರ ಮಾರ್ಚ್‍ನಲ್ಲಿ ಕೋವಿಡ್ ರಾಜ್ಯಕ್ಕೆ ಕಾಲಿಟ್ಟಾಗ ಇಡೀ ದೇಶದಲ್ಲಿ ಪ್ರಪ್ರಥಮ ಸಾವು ನಮ್ಮ ರಾಜ್ಯದ ಕಲಬುರಗಿಯಲ್ಲಿ ಜರುಗಿತು. ಆ ಸಮಯದಲ್ಲಿ ಈ ರೋಗಕ್ಕೆ ತುತ್ತಾದವರಿಗೆ ಚಿಕಿತ್ಸೆ ನೀಡಲು ಅವಶ್ಯವಿರುವ ಸಾಮಗ್ರಿಗಳು ಮಾರುಕಟ್ಟೆಯಲ್ಲಿ ಹೇರಳವಾಗಿ ಲಭ್ಯವಿರಲಿಲ್ಲ ಹಾಗೂ ಅವುಗಳ ಬೆಲೆ ಕೂಡ ಇಂದಿಗಿಂತ ಹೆಚ್ಚಿತ್ತು ಎನ್ನುವುದನ್ನು ಅರಿತುಕೊಂಡು ಮಾತನಾಡಬೇಕು ಎಂದು ಹೇಳಿದರು.

ಕಳೆದ ಮೂರು ತಿಂಗಳ ಹಿಂದೆ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿರುವಾಗ ಮಾರುಕಟ್ಟೆಯಲ್ಲಿ ಲಭ್ಯವಿದ್ದ ಉತ್ಪನ್ನಗಳನ್ನು ಅಂದಿನ ಬೆಲೆಯಲ್ಲಿ ಖರೀದಿಸಲಾಗಿದೆ. ಅಂದಿನ ಮಾರುಕಟ್ಟೆಯ ಬೆಲೆಗಿಂತ ಇಂದು ಕಡಿಮೆ ಬೆಲೆಯಲ್ಲಿ ಆರೋಗ್ಯ ಸಂಬಂಧಿತ ಸಲಕರಣೆ ಹಾಗೂ ಉತ್ಪನ್ನಗಳನ್ನು ಖರೀದಿಸಬಹುದಾಗಿದ್ದು, ನಮ್ಮ ರಾಜ್ಯ ಸೇರಿದಂತೆ ದೇಶದಲ್ಲಿ ಪ್ರಸ್ತುತ ಎನ್ 95 ಮಾಸ್ಕ್ ಹಾಗೂ ಪಿಪಿಇ ಕಿಟ್‍ಗಳನ್ನು ಉತ್ಪಾದಿಸಲಾಗುತ್ತಿದೆ. ಹಾಗಾಗಿ, ಬೆಲೆಗಳು ಈ ಹಿಂದಿಗಿಂತ ಈಗ ಕಡಿಮೆ ಬೆಲೆಯಲ್ಲಿ ದೊರಕುತ್ತಿವೆ.

ಪ್ರತಿಪಕ್ಷ ಆರೋಪಿಸಿರುವಂತೆ ಆರೋಗ್ಯ ಇಲಾಖೆಯಲ್ಲಿ ಸಾವಿರಾರು ಕೋಟಿ ರೂ.ಗಳ ಅವ್ಯವಹಾರ ಸಾಧ್ಯವೇ ಇಲ್ಲ, ಇಲ್ಲಿಯವರೆಗೆ ಆರೋಗ್ಯ ಇಲಾಖೆ ಔಷಧ ನಿಯಂತ್ರಣ ಇಲಾಖೆ ಮೂಲಕವೇ ಖರೀದಿಸಿರುವ ಕೋವಿಡ್ ಚಿಕಿತ್ಸೆ ಸಂಬಂಧಿತ ಉತ್ಪನ್ನಗಳ ಒಟ್ಟು ಬೆಲೆ 290 ಕೋಟಿ 60 ಲಕ್ಷದ 12 ಸಾವಿರದ 597 ರೂ.ಗಳು ಮಾತ್ರವಾಗಿದೆ ಎಂದು ಸ್ಪಷ್ಟಪಡಿಸಿದರು.

ವೆಂಟಿಲೆಟರ್ ಗಳಲ್ಲಿ ವಿವಿಧ ರೀತಿಯ ಮಾದರಿಗಳಿದ್ದು, ಪ್ರತಿ ಮಾದರಿಗೂ ಪ್ರತ್ಯೇಕ ದರವಿದೆ. ಈಗಾಗಲೇ ಕೇಂದ್ರ ಸರ್ಕಾರಿ ಸ್ವಾಮ್ಯದ ಹೆಚ್.ಎ.ಎಲ್ ವೆಂಟಿಲೆಟರ್‍ ಗಳನ್ನು ಉತ್ಪಾದಿಸಲು ಆರಂಭಿಸಿದ್ದು, ಕೇಂದ್ರ ಸರ್ಕಾರ ರಾಜ್ಯಕ್ಕೆ ಒಟ್ಟು 2145 ವೆಂಟಿಲೆಟರ್‍ಗಳನ್ನು ನೀಡಲು ಸಮ್ಮತಿಸಿದ್ದು ಈಗಾಗಲೇ 640 ವೆಂಟಿಲೆಟರ್‍ ಗಳನ್ನು ಉಚಿತವಾಗಿ ಪೂರೈಸಿದೆ.

ವಿವಿಧ ರೀತಿಯ ಗುಣಮಟ್ಟದ ಹಾಗೂ ನಾವೀನ್ಯತೆ ಹೊಂದಿರುವ ವೆಂಟಿಲೆಟರ್‍ ಗಳನ್ನು ಖರೀದಿಸುವ ಉದ್ದೇಶದಿಂದ ಈಗಾಗಲೇ ಕೇಂದ್ರ ಸರ್ಕಾರ ಗುರುತಿಸಿರುವ ಸರಬರಾಜುದಾರರಿಂದ ಮಾತ್ರ ಖರೀದಿಸಲಾಗಿದ್ದು, ಹೆಚ್ಚಿನ ಮಟ್ಟದಲ್ಲಿ ಖರೀದಿಸಿದ್ದರಿಂದ ಮಾರುಕಟ್ಟೆಯ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿಸಲಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು