News Karnataka Kannada
Tuesday, April 16 2024
Cricket
ಬೆಂಗಳೂರು ನಗರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯ, ಫಲಿತಾಂಶ ಕುರಿತು ಸಚಿವ ಬಿ.ಸಿ. ನಾಗೇಶ್ ಮಾಹಿತಿ

B C Nagesh
Photo Credit :

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯವಾಗಿದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ವಿಜಯಪುರ ಜಿಲ್ಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.28ರಿಂದ ಆರಂಭವಾದ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚು ಇದೆ. ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ ಎಂದರು.

ಏ.12ರಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಅನಾರೋಗ್ಯ ಲಕ್ಷಣಗಳು ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಅವಧಿಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು