News Karnataka Kannada
Sunday, April 14 2024
Cricket
ಬೆಂಗಳೂರು ನಗರ

ಏ.29ಕ್ಕೆ ಬೆಂಗಳೂರಿನ ಸೆಮಿಕಾನ್ ಇಂಡಿಯಾ 2022 ಸಮ್ಮೇಳನ ಉದ್ಘಾಟಿಸಲಿರುವ ಪ್ರಧಾನಿ

BENGALURU: Prime Minister's Prime Minister to visit The State tomorrow
Photo Credit :

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಏ. 29ರಿಂದ ಮೇ 1ರವರೆಗೆ ಬೆಂಗಳೂರಿನ ಐಟಿಸಿ ಗಾರ್ಡೇನಿಯಾದಲ್ಲಿ ಸೆಮಿಕಾನ್ ಇಂಡಿಯಾ 2022 ಸಮ್ಮೇಳನ ಆಯೋಜಿಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏ. 29ರ ಬೆಳಗ್ಗೆ 11ಗಂಟೆಗೆ ಈ ಸಮ್ಮೇಳನ ಉದ್ಘಾಟಿಸಲಿದ್ದಾರೆ.

ಸೆಮಿಕಾನ್ ಇಂಡಿಯಾ – 2022, 3 ದಿನಗಳ ಸಮಾವೇಶವನ್ನು ಆಯೋಜಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಕೋನದಲ್ಲಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ, ಸೆಮಿಕಂಡಕ್ಟರ್ ವಿನ್ಯಾಸ, ಉತ್ಪಾದನೆ ಮತ್ತು ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಲು ಯೋಜಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಜಾಗತಿಕ ಸೆಮಿಕಂಡಕ್ಟರ್ ಮೌಲ್ಯ ಸರಪಳಿಯಲ್ಲಿ ಭಾರತವನ್ನು ಮಹತ್ವದ ಪಾತ್ರದಾರಿಯನ್ನಾಗಿ ಮಾಡುವುದು ಪ್ರಧಾನಿ ಅವರ ದೃಷ್ಟಿಕೋನವಾಗಿದೆ. ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ- ಈ ವಲಯದಲ್ಲಿ ಕ್ಷಿಪ್ರ ನಿರ್ಣಾಯಕ ಪ್ರಗತಿ ಮಾಡಲಾಗಿದೆ. ಸೆಮಿಕಾನ್ ಇಂಡಿಯಾ 2022 ಸಮ್ಮೇಳನವು ಸೆಮಿಕಂಡಕ್ಟರ್ ಉದ್ಯಮ, ಸಂಶೋಧನೆ ಮತ್ತು ಶಿಕ್ಷಣದಿಂದ ಪ್ರಪಂಚದಾದ್ಯಂತದ ಅತ್ಯುತ್ತಮ ಮನಸ್ಸುಗಳನ್ನು ಆಕರ್ಷಿಸುತ್ತದೆ ಮತ್ತು ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಸೆಮಿಕಂಡಕ್ಟರ್ ಉದ್ಯಮಕ್ಕೆ ಜಾಗತಿಕ ಕೇಂದ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ಅವರ ದೃಷ್ಟಿಕೋನವನ್ನು ಪೂರೈಸುವಲ್ಲಿ ದೊಡ್ಡ ಹೆಜ್ಜೆಯಾಗಿ ಕಾರ್ಯನಿರ್ವಹಿಸುತ್ತದೆ.

ಈ ಸಮ್ಮೇಳನದಲ್ಲಿ ಮೈಕ್ರಾನ್ ಸಿಇಒ ಸಂಜಯ್ ಮೆಹ್ರೋತ್ರಾ, ಕ್ಯಾಡೆನ್ಸ್ ಸಿಇಒ ಅನಿರುದ್ಧ ದೇವಗನ್, ಇಂಡೋ-ಅಮೆರಿಕ ವೆಂಚರ್ ಪಾಲುದಾರ ಸಂಸ್ಥಾಪಕ ವಿನೋದ್ ಧಾಮ್, ಸೆಮಿ ಅಧ್ಯಕ್ಷ ಅಜಿತ್‌ ಮನೋಚಾ, ಎಮೆರಿಟಸ್ ಸ್ಟಾನ್‌ಫೋರ್ಡ್ ಪ್ರೊ. ಆರೋಗ್ಯಸ್ವಾಮಿ ಪಾಲ್‌ರಾಜ್ ಮತ್ತಿತರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸೆಮಿಕಂಡಕ್ಟರ್ ವಲಯದಲ್ಲಿ ಪಾಲುದಾರಿಕೆ ಮತ್ತು ಮೈತ್ರಿಗಳನ್ನು ರೂಪಿಸುವ ಮೂರು ದಿನಗಳ ಸಮ್ಮೇಳನದಲ್ಲಿ ಸಹಿ ಮಾಡಲಿರುವ ಒಡಂಬಡಿಕೆಗಳ ಸಂಖ್ಯೆಯನ್ನು ಸಚಿವಾಲಯವು ಎದುರು ನೋಡುತ್ತಿದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು