News Karnataka Kannada
Friday, April 19 2024
Cricket
ಬೆಂಗಳೂರು ನಗರ

ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರ ಕಡೆಗಣನೆ: ಟಿ.ಎಸ್.ನಾಗಾಭರಣ

Photo Credit :

ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರ ಕಡೆಗಣನೆ: ಟಿ.ಎಸ್.ನಾಗಾಭರಣ

ಬೆಂಗಳೂರು: ಕನ್ನಡದ ನೆಲ-ಜಲ, ಸವಲತ್ತುಗಳನ್ನು ಬಳಸಿಕೊಂಡು ಬೃಹತ್ತಾಗಿ ಬೆಳೆದಿರುವ ಐಟಿಬಿಟಿ ಸಂಸ್ಥೆಗಳಲ್ಲಿ  ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಮೀನಾ ನಾಗಾರಾಜ್ ಅವರಿಗೆ ತಾಕೀತು ಮಾಡಿದರು.

ಐಟಿಬಿಟಿ ಸಂಸ್ಥೆಗಳು ಕನ್ನಡಿಗರನ್ನು ಕಡೆಗಣಿಸುತ್ತಿವೆ, ಅಲ್ಲದೆ ಕನ್ನಡಿರಿಗೆ ಸಿಗಬೇಕಾದ ಉದ್ಯೋಗಗಳು ಅನ್ಯಭಾಷಿಕರ ಪಾಲಾಗುತ್ತಿವೆ ಎಂಬ ದೂರುಗಳು ಪ್ರಾಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜಾಲ ಸಂಪರ್ಕ (ಆನ್ ಲೈನ್)ದ ಮೂಲಕ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಪರಿಶೀಲನಾ ಸಭೆ ನಡೆಸಿದ ಅವರು, ಈ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಕಡೆಗಣಿಸಲಾಗುತ್ತಿರುವ ಬಗ್ಗೆ ದೂರುಗಳು ಪ್ರಾಧಿಕಾರಕ್ಕೆ ಬರುತ್ತಿವೆ. ಈ ಬಗ್ಗೆ ಕೂಡಲೇ ಕ್ರಮವಹಿಸಿ ಪ್ರಾಧಿಕಾರಕ್ಕೆ ವರದಿ ನೀಡುವಂತೆ ಸೂಚಿಸಿದರು.

ಕೆಟಿಐಎಸ್ ನಲ್ಲಿ ಅನ್ಯಭಾಷಿಕರು ಅಡ್ವೈಜರ್ ಗಳಾಗಿ ನೇಮಕಗೊಂಡಿರುವುದರಿಂದ ರಾಜ್ಯ ಸರ್ಕಾರದ ಯೋಜನೆಗಳು ಹೊರಗಿನವರ ಪಾಲಾಗುತ್ತಿವೆ. ಇಂತಹ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲ. ಮುಂದೆ ಹೀಗಾಗಂತೆ ತಡೆಯಲು ಮುಂದಿನ ಹೊಸ ನೀತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ  ಇಲಾಖಾ ನಿರ್ದೇಶಕರಿಗೆ ಸೂಚಿಸಿದರು.

ಅನಿಮೇಷನ್ ಗೆ ಸಂಬಂಧಿಸಿದಂತೆ ಕನ್ನಡ ಚಲನಚಿತ್ರ ಕ್ಷೇತ್ರವನ್ನು ಕಡೆಗಣಿಸಲಾಗುತ್ತಿದೆ. ನಮ್ಮ ನಾಡಿನ ಸೌಲಭ್ಯವನ್ನು ಪಡೆದು ಹಾಲಿವುಡ್ ಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಯೋಜನೆ ರೂಪಿಸಿರುವುದು ಖಂಡನೀಯ. ನಮ್ಮವರು ಕೇರಳ, ಮುಂಬೈ ಮುಂತಾದ ಕಡೆಗಳಿಗೆ ಹೋಗಿ ಅನಿಮೇಷನ್ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ನಮ್ಮ ನೆಲೆದಲ್ಲಿ ನಮಗೆ ಇದರ ಉಪಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

2 ವರ್ಷಗಳ ಹಿಂದೆ ನಡೆದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಪರಿಶೀಲನೆಗೆ ಸಂಬಂಧಿಸಿದಂತೆ ಯಾವುದೇ ಅನುಪಾಲನಾ ವರದಿಯನ್ನು ಇದೂವರೆಗೂ ನೀಡದೆ ಇರುವುದು ಸರಿಯಲ್ಲ. ಇಲಾಖಾ ವ್ಯಾಪ್ತಿಯ ಜಾಲತಾಣಗಳು ಕೂಡ ಇಂಗ್ಲೀಷ್ ನಲ್ಲಿದ್ದು ಕೂಡಲೇ ಇದನ್ನು ಕನ್ನಡೀಕರಣ ಮಾಡಲು ಶೀಘ್ರವೇ ಕ್ರಮಕೈಗೊಳ್ಳುವಂತೆ ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು