News Karnataka Kannada
Friday, April 19 2024
Cricket
ಬೆಂಗಳೂರು ನಗರ

ಕರಾವಳಿ ಭಾಗದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ 

Photo Credit :

ಕರಾವಳಿ ಭಾಗದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ 

ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಹಳದಿ ಆಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಾಗಿ ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಬೆಳಗಾವಿ, ಧಾರಾವಾಡ, ಗದಗ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಚೆಂಬರ್ 8ರವರೆಗೂ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು